ಕಲ್ಪ ಮೀಡಿಯಾ ಹೌಸ್ | ಮೈಸೂರು |
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ #Southwest Teachers Contituency ಅಭ್ಯರ್ಥಿಯಾಗಿದ್ದ ಎಂ ರಮೇಶ್ ಶೆಟ್ಟಿ #Ramesh Shetty ಇವರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಪಕ್ಷೇತರರಾಗಿ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಕಳೆದ ಬಾರಿಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಅಲ್ಪ ಮತದಿಂದ ಪರಾಭವಗೊಂಡಿದ್ದರು.
ನಂತರ ಕಾಂಗ್ರೆಸ್ ಪಕ್ಷ ಸೇರಿ 30 ತಾಲೂಕಿನಲ್ಲಿಯೂ ಶಿಕ್ಷಕರೊಡನೆ ನಿರಂತರ ಸಂಪರ್ಕ ಸಾಧಿಸಿದ್ದರು. ಅಲ್ಲದೆ ಈ ಬಾರಿ ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಶಿಕ್ಷಕರನ್ನು
ನೋಂದಾಯಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾರರ ಪಟ್ಟಿಗೆ ಅತಿ ಹೆಚ್ಚು ಶಿಕ್ಷಕರನ್ನು ಸೇರಿಸುವ ಕೆಲಸವನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಿದ್ದರು. ಕೊನೆ ಹಂತದವರೆಗೂ ಕಾಂಗ್ರೆಸ್ ಪಕ್ಷ ಇವರಿಗೆ ಟಿಕೆಟ್ ನೀಡುತ್ತದೆ ಎಂದು ಭರವಸೆ ಇಟ್ಟುಕೊಂಡಿದ್ದರು. ಪಕ್ಷದ ಮುಖಂಡರ ಭರವಸೆ ಹುಸಿಯಾದ ಹಿನ್ನೆಲೆಯಲ್ಲಿ ಇವರು ಮೂಲತಃ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯವರಾಗಿರುವುದರಿಂದ, ಕರಾವಳಿ ಭಾಗವನ್ನು ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಸಂಪೂರ್ಣ
Also read: ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ: ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ
ನಿರ್ಲಕ್ಷ ಮಾಡಿರುವುದನ್ನು ಶಿಕ್ಷಕರ, ಉಪನ್ಯಾಸಕರ ವಿವಿಧ ಸಂಘಟನೆಗಳು ಖಂಡಿಸಿವೆ. ಅಲ್ಲದೆ ಆ ಭಾಗದ ಎರಡು ಪಕ್ಷಗಳ ಮುಖಂಡರುಗಳು ಕೂಡ ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೇ ಹೆಚ್ಚು ಮತದಾರರು ಇರುವುದರಿಂದ ಶಿಕ್ಷಕರಿಂದ ಹೆಚ್ಚು ಒತ್ತಡ ಬಂದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post