No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ | ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀ ಸಂದೇಶ

ಸೋಸಲೆ ವ್ಯಾಸರಾಜರ ಮಠದ ಶ್ರೀಮನ್ ನ್ಯಾಯ ಸುಧಾಮಂಗಳ ಮಹೋತ್ಸವ ಆರಂಭ

kalpa News by kalpa News
June 3, 2024
in ಮೈಸೂರು
0
ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ | ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀ ಸಂದೇಶ

ನಗರದ ಕೃಷ್ಣಮೂರ್ತಿಪುರಂನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಭಾನುವಾರ ಸೋಸಲೆ ಮಠ ಹಮ್ಮಿಕೊಂಡಿದ್ದ ಶ್ರೀ ಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಉದ್ಘಾಟನೆ ಸಂದರ್ಭ ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ , ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ಸೌಮಿತ್ರಿ ಆಚಾರ್ಯ, ಸುಘೋಷ, ಪ್ರಣವ ಆಚಾರ್ಯ ಮತ್ತು ಆಯಾಚಿತ ಶ್ರೀಶ ಆಚಾರ್ಯ ಇದ್ದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ ಇದೆ. ಹಾಗಾಗಿ ವಿದ್ಯಾರ್ಥಿಗಳು ವೇದ ವಿದ್ಯೆ ಸಂಪಾದನೆಗೆ ಶ್ರಮಿಸಬೇಕು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ಶ್ರೀ ವ್ಯಾಸರಾಜ ಮಠ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಭಾನುವಾರ ಸಂಜೆ ಚಾಲನೆ ನೀಡಿದ ನಂತರ ಅವರು ಆಶೀರ್ವಚನ ನೀಡಿದರು.

ನಗರದ ಕೃಷ್ಣಮೂರ್ತಿಪುರಂ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ವ್ಯಾಸರಾಜರ ಮಹಾಸಂಸ್ಥಾನ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಭಾನುವಾರ ಸಂಜೆ ಆಗಮಿಸಿದ ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಪೂರ್ಣ ಕುಂಭ ಸಹಿತ ಸ್ವಾಗತಿಸಲಾಯಿತು. ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂಧನಾಚಾರ್ಯ, ಪಂಡಿತ ರಾಮಾಚಾರ್ಯ ಮತ್ತು ಹಿರಿಯ ವಿದ್ವಾಂಸ
ಬಿದರಹಳ್ಳಿ ಕೃಷ್ಣಾಚಾರ್ಯ ಇತರರು ಹಾಜರಿದ್ದರು.

ಸೋಸಲೆ ವಿದ್ಯಾಪೀಠದ ವಿದ್ಯಾರ್ಥಿಗಳು ಸಮರ್ಥವಾಗಿ ಅಧ್ಯಯನ ನಡೆಸಿ ಶ್ರೀ ಜಯತೀರ್ಥರು ರಚಿಸಿದ ಸುಧಾ ಗ್ರಂಥದ ಬಗ್ಗೆ ಉತ್ತಮ ವ್ಯಾಖ್ಯಾನ ನೀಡಿದ್ದಾರೆ. ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಈ ವಿದ್ಯಾರ್ಥಿಗಳಿಗೆ ಪಾಠ, ಪ್ರವಚನ ಮಾಡಿ ವಿದ್ಯಾರ್ಜನೆಗೆ ಶ್ರಮಿಸಿದ್ದಾರೆ. ಇದು ಯತಿಗಳು ಮುಂದಿನ ಪೀಳಿಗೆಗೆ ಮಾಡುವ ಮಾದರಿ ಕಾರ್ಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ನಿರ್ಭೀತಿಯಿಂದ, ಸಂಸ್ಕೃತದಲ್ಲಿ ಸುಲಲಿತವಾಗಿ ವಿಷಯದ ಅನುವಾದ, ವ್ಯಾಖ್ಯಾನ ಮತ್ತು ಮಂಡನೆ ಮಾಡುವ ಶೈಲಿಯನ್ನು ಕರಗತ ಮಾಡಿಕೊಂಡರೆ ಮುಂಬರುವ ದಿನಗಳಲ್ಲಿ ನಾಡಿನ ಖ್ಯಾತ ವಿದ್ವಾಂಸರಾಗಬಹುದು ಎಂದರು.
ಇಂದು ಸುಧಾ ಪರೀಕ್ಷೆ ನೀಡಿದ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಸಾಧನಾ ಮಾರ್ಗದಲ್ಲಿ ಇದ್ದಾರೆ. ಪುಸ್ತಕ ನಿರಪೇಕ್ಷವಾಗಿ ವಿದ್ಯಾರ್ಥಿಗಳು ಮುಕ್ತ ಸಭೆಯಲ್ಲಿ ಪಂಡಿತರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದ್ದಾರೆ. ಇದು ಅವರ ಕೌಶಲ ಮತ್ತು ಜ್ಞಾನದ ಉತ್ತಮ ಹಂತದ ದರ್ಶನ ಮಾಡಿಸಿದೆ ಎಂದು ಮಂತ್ರಾಲಯ ಶ್ರೀಗಳು ನುಡಿದರು.

ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ವಿದ್ವತ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಗುರುಕುಲ ಪದ್ಧತಿ ಅಧ್ಯಯನ ಮಾಡಿದ ಹಿರಿಯ ವಿದ್ಯಾರ್ಥಿಗಳಾದ ಸುಘೋಷ ಆಚಾರ್ಯ ಮತ್ತು ಪ್ರಣವ ಆಚಾರ್ಯ ಅವರು ಶ್ರೀಮನ್ ನ್ಯಾಯಸುಧಾ ಗ್ರಂಥದ ನವಿ ಲಕ್ಷಣತ್ವಾಧಿಕರಣದ ಮೌಖಿಕ ಪರೀಕ್ಷೆಯನ್ನು ಎದುರಿಸಿ ಪಂಡಿತರ ಪ್ರಶ್ನೆಗಳಿಗೆ ಸೂಕ್ತವಾದ ಉತ್ತರ ನೀಡಿದರು.
ಪಂಡಿತ, ವಿದ್ವಾಂಸರ ಉಪಸ್ಥಿತಿ
ಮಂತ್ರಾಲಯದ ಹಿರಿಯ ವಿದ್ವಾಂಸರಾದ ಮಹಾಮಹೋಪಾಧ್ಯಾಯ ರಾಜಾ ಎಸ್. ಗಿರಿ ಆಚಾರ್ಯ, ಗುರುಸಾರ್ವಭೌಮ ವಿದ್ಯಾಪೀಠದ ಪ್ರಾಚಾರ್ಯ ವಾದಿರಾಜ ಆಚಾರ್ಯ, ಶ್ರೀನಿವಾಸಮೂರ್ತಿ ಆಚಾರ್ಯ, ಬೆಂಗಳೂರಿನ ಪೇಜಾವರ ವಿದ್ಯಾಪೀಠದ ಪ್ರಾಧ್ಯಾಪಕ ಪಂಡಿತ ಮಾತರಿಶ್ವಾಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಶ್ರೀನಿಧಿ ಆಚಾರ್ಯ ಪ್ಯಾಟಿ, ಹಿರಿಯರಾದ ವಿದ್ವಾಂಸ ಶೇಷಗಿರಿ ಆಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಇತರರು ಹಾಜರಿದ್ದರು.

ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಮಠದ ವಿದ್ವಾಂಸರು ವೇದ ಘೋಷದೊಂದಿಗೆ ಸ್ವಾಗತಿಸಿದರು. ಹಿರಿಯರಾದ ವಿದ್ವಾಂಸ ಶೇಷಗಿರಿ ಆಚಾರ್ಯ, ಬಿದರಹಳ್ಳಿ ಕೃಷ್ಣಾಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಇತರರು ಹಾಜರಿದ್ದರು.

ಇಂದಿನ ಕಾರ್ಯಕ್ರಮ
ಜೂನ್ 3ರಂದು ದಿನಪೂರ್ಣ ನಾಲ್ವರು ವಿದ್ಯಾರ್ಥಿಗಳಿಗೆ ಶ್ರೀ ಸುಧಾ ಗ್ರಂಥದ ಮೇಲಿನ ಮೌಖಿಕ ಪರೀಕ್ಷೆ, ವ್ಯಾಖ್ಯಾನಗಳು ನಡೆಯಲಿದೆ.

ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನದ ಶ್ರೀ ಸತ್ಯಾತ್ಮ ತೀರ್ಥರು, ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯನಿಧಿ ತೀರ್ಥರು, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ತಮ್ಮ ತಮ್ಮ ಸಂಸ್ಥಾನ ದೇವರುಗಳಿಗೆ ಪೂಜೆ ಸಮರ್ಪಿಸಲಿದ್ದಾರೆ. ನಂತರ ವಿದ್ವತ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಇಡೀ ದಿನದ ಕಲಾಪ ಸಂಪನ್ನಗೊಳ್ಳಿದೆ. ನಾಡಿನ ವಿವಿಧ ಮಠ- ಪೀಠದ ವಿದ್ವಾಂಸರು ಭಾಗವಹಿಸಲಿದ್ದಾರೆ.

ರಂಜಿಸಲಿದೆ ದಾಸವಾಣಿ
ಸೋಮವಾರ ಸಂಜೆ 6ಕ್ಕೆ ವಿದ್ವಾನ್ ಸಮೀರಾಚಾರ್ಯರಿಂದ ದಾಸವಾಣಿ ಸಂಗೀತ ಕಚೇರಿ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaMantralayamysoreNyayasudha MangalaSosaleVidyapeethaVyasaraja Mathaನ್ಯಾಯ ಸುಧಾ ಮಂಗಳಮಂತ್ರಾಲಯಮೈಸೂರುವಿದ್ಯಾಪೀಠಶ್ರೀ ಜಯತೀರ್ಥರುಶ್ರೀ ರಾಘವೇಂದ್ರ ಸ್ವಾಮಿಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಶ್ರೀ ವ್ಯಾಸರಾಜ ಮಠಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಸೋಸಲೆ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Exit Poll 2024 | ತಮಿಳುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ | ಅಣ್ಣಾಮಲೈ ಕಮಾಲ್

Next Post

ಭದ್ರಾವತಿ: ಕ್ಷುಲ್ಲಕ ಕಾರಣಕ್ಕಾಗಿ ವೃದ್ಧನ ಹತ್ಯೆ

kalpa News

kalpa News

Next Post
Faridabad Teacher Murder Stabbed School Revenge Attack

ಭದ್ರಾವತಿ: ಕ್ಷುಲ್ಲಕ ಕಾರಣಕ್ಕಾಗಿ ವೃದ್ಧನ ಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL