ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಾಡ ಹಬ್ಬ ಮೈಸೂರು ದಸರಾಗೆ #Mysore Dasara ಇಂದು ಅಧಿಕೃತ ಚಾಲನೆ ದೊರೆತಿದ್ದು, ಭಾರೀ ವಿರೋಧ ವ್ಯಕ್ತವಾಗಿದ್ದರೂ ಸಹ ಅತಿಥಿ ಸಾಹಿತಿ ಬಾನು ಮುಷ್ತಾಕ್ #Banu Mushthaq ಅವರು ಚಾಮುಂಡೇಶ್ವರಿಗೆ #Chamundeshwari ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ನಾಡ ಅಧಿದೇವತೆ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಸಿಎಂ ಸಿದ್ದರಾಮಯ್ಯ #CM Siddaramaiah ಅವರ ಉಪಸ್ಥಿತಿಯಲ್ಲಿ ಸಾಹಿತಿ ಬಾನು ಮುಷ್ತಾಕ್ ಅವರು ದೇವಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ, ಪುರ್ಷ್ಪಾಚನೆ ಮಾಡಿ ದಸರಾಗೆ ಚಾಲನೆ ನೀಡಿದರು.

ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್ ದೇವಸ್ಥಾನಕ್ಕೆ ಆಗಮಿಸಿದರು. ಗರ್ಭಗುಡಿ ಮುಂಭಾಗದ ಆವರಣದಲ್ಲಿ ನಿಂತು ತಾಯಿ ಚಾಮುಂಡಿ ದರ್ಶನ ಪಡೆದರು. ನಂತರ ಗಣಪತಿಗೆ ಕೈ ಮುಗಿದು, ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದರು.

ನಾಡದೇವಿಗೆ ಬಾನು ಮುಷ್ತಾಕ್ ಅವರು ಪೂಜೆ ಸಲ್ಲಿಸಿ ಭಕ್ತಿಯಿಂದ ಭಾಗಿಯಾಗಿ ಮಹಾಮಂಗಳಾರತಿ ಸ್ವೀಕರಿಸಿದರು. ದೇವಿಯ ದರ್ಶನ ಪಡೆದು ಭಾವುಕರಾದರು.
ಜಾನಪದ ಕಲಾ ತಂಡಗಳ ಜೊತೆ ಮಹಿಷಾಸುರ ಪ್ರತಿಮೆಯಿಂದ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಚಾಮುಂಡಿ ದೇವಸ್ಥಾನದ ಒಳಗಡೆ ಪ್ರವೇಶಿಸಿ ಪೂಜೆಯಲ್ಲಿ ಭಾಗಿಯಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















Discussion about this post