ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ #Ugadi and Ramzan ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು #Special Express Train ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06567 ಮೈಸೂರು-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 28ರಂದು ಸಂಜೆ 7.10ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ.
ರೈಲು ಸಂಖ್ಯೆ 06568 ವಿಜಯಪುರ – ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.31ರಂದು ಸಂಜೆ 7.00 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ 2.20ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.
Also read: ಸೊರಬ | ಮಹಿಳೆಯರು ಅಬಲೆಯಲ್ಲ, ಶಕ್ತಿಯ ಸ್ವರೂಪ: ಡಾ. ಜ್ಞಾನೇಶ್
ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್’ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆAಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ರೈಲು 3 ಎಸಿ ಟು ಟೈರ್, 6 ಎಸಿ ತ್ರಿ ಟೈರ್, 10 ಸ್ಲೀರ್ಪ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್’ಎಲ್’ಆರ್/ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್’ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post