ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಗರದ ಅಗ್ರಹಾರದ ಶೃಂಗೇರಿ #Sringeri ಶ್ರೀ ಶಂಕರಮಠದ ಅಭಿನವ ಶಂಕರಾಲಯದ ಶತಮಾನೋತ್ಸವ ಸಂಭ್ರಮಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿಗೆ ಆಗಮಿಸಿದ ಶೃಂಗೇರಿ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ #VidhushekaraBharatiSwamiji ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಮೆರವಣಿಗೆ ಮೂಲಕ ಶ್ರೀಮಠಕ್ಕೆ ಕರೆತರಲಾಯಿತು.
ನಗರ ಪ್ರವೇಶಿಸಿದ ಶ್ರೀಗಳನ್ನು ಮಹಾರಾಜ ಕಾಲೇಜು ಮೈದಾನದ ಬಳಿಯಿಂದ ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ ಮಾರ್ಗವಾಗಿ ಶ್ರೀಶಂಕರ ಮಠಕ್ಕೆ ಕುಂಭಮೇಳ ಮಂಗಳವಾದ್ಯದೊಂದಿಗೆ ಶೋಭಾಯಾತ್ರೆ ಮೂಲಕ ಕರೆ ತರಲಾಯಿತು.

ಮಠದ ಆವರಣದಲ್ಲಿ ನಿರ್ಮಿಸಿರುವ ಶ್ರೀ ಸಚ್ಚಿದಾನಂದ ವಿಲಾಸ ಗುರುಭವನವನ್ನು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಶಾಸಕ ಎಸ್.ಎ. ರಾಮದಾಸ್, ಎಂ.ಕೆ.ಸೋಮಶೇಖರ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಜಿಲ್ಲಾ ಬ್ರಾಹ್ಮಣ ಸಂಘದ ಟಿ.ಡಿ. ಪ್ರಕಾಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post