ಕಲ್ಪ ಮೀಡಿಯಾ ಹೌಸ್ | ಮೈಸೂರು |
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ Karnataka Sanskrit University ಶನಿವಾರ ಆಯೋಜಿಸಿದ್ದ ಮಕ್ಕಳ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಮೈಸೂರಿನ ಸೋಸಲೆ ವ್ಯಾಸರಾಜರ ಮಠದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳು ಹಲವು ಬಹುಮಾನ ಪಡೆದಿದ್ದಾರೆ.
ನ್ಯಾಯಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಪ್ರಣವ ಆಚಾರ್ಯ (ಪ್ರ), ಸಾಂಖ್ಯ-ಯೋಗಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ವಿ.ಸೌಮಿತ್ರಿ ಆಚಾರ್ಯ (ದ್ವಿ), ವ್ಯಾಕರಣ ಭಾಷಣ ಸ್ಪರ್ಧೆಯಲ್ಲಿ ಸರ್ವಜ್ಞ (ತೃ), ಕಾವ್ಯ ಶಲಾಕಾ ಸ್ಪರ್ಧೆಯಲ್ಲಿ ವಿಶ್ವಜ್ಞ (ತೃ) ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಖ್ಯಾತ ತರ್ಕ ವಿದ್ವಾಂಸ ದೇವದತ್ತ ಪಾಟೀಲ, ಸಂಸ್ಕೃತ ವಿವಿ ಕುಲಪತಿ ಪ್ರೊ. ಗಿರೀಶಚಂದ್ರ, ಕುಲಸಚಿವ ಪ್ರೊ. ವೀರನಾರಾಯಣ ಪಾಂಡುರಂಗಿ ಬಹುಮಾನ ವಿತರಿಸಿದರು.
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ವ್ಯಾಸರಾಜ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಶುಭಾಶೀರ್ವಾದ ನೀಡಿದ್ದಾರೆ ಎಂದು ಎಂದು ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗದ 25 ಗುರುಕುಲ ಮತ್ತು ವಿದ್ಯಾಪೀಠಗಳ 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ರಾಷ್ಟ್ರಮಟ್ಟಕ್ಕೆ ಆಯ್ಕೆ:
ನ್ಯಾಯಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರಣವ ಆಚಾರ್ಯ ವಾರಾಣಸಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post