ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಗರದ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯೊಬ್ಬರಿಗೆ ಹಠಾತ್ ಹೃದಯಾಘಾತ ಉಂಟಾಗಿ ಮೃತಪಟ್ಟ ದುರ್ಘಟನೆ ಶುಕ್ರವಾರ ನಡೆದಿದೆ. ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು ಪೋಷಕರಲ್ಲಿ ಆತಂಕ ಮೂಡಿಸುತ್ತಿವೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೂಲದ ಮಾದೇಶ್ ಮೃತ ವಿದ್ಯಾರ್ಥಿ. ಇವರು ಮೈಸೂರಿನಲ್ಲಿ ಅಕ್ಕನ ಮನೆಯಲ್ಲಿ ವಾಸವಿದ್ದು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಶುಕ್ರವಾರ ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಕಸ್ಮಿಕವಾಗಿ ಹೃದಯಾಘಾತಕ್ಕೊಳಗಾಗಿ ಕುಸಿದುಬಿದ್ದಿದ್ದಾರೆ. ಇದನ್ನು ಕಂಡ ಸಹಪಾಠಿಗಳು ಹಾಗೂ ಕಾಲೇಜು ಸಿಬ್ಬಂದಿ ತಕ್ಷಣವೇ ನೆರವಿಗೆ ಧಾವಿಸಿ, ಕಾಲೇಜಿನ ವಾಹನದ ಮೂಲಕ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಒಳಪಡಿಸಿದರೂ, ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Comments 1