ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ಅಭಿಪ್ರಾಯಪಟ್ಟರು.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು.

Also read: ಬರಪರಿಹಾರ: ಕೇಂದ್ರ ಬೇಡಿಕೆ ಈಡೇರಿಸುವ ಭರವಸೆ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಇಂಡಿಯ ಸಭೆಯಲ್ಲಿ ತೀರ್ಮಾನ
ಇಂಡಿಯ INDIA ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪ ಮಾಡಲಾಗಿರುವ ಕುರಿತು ಅಭಿಪ್ರಾಯ ಕೇಳಿದ್ದಕ್ಕೆ, ಇಂಡಿಯ ಸಭೆಯಲ್ಲಿ ತೀರ್ಮಾನ ಮಾಡಬೇಕು ಎಂದು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post