ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಂಸ್ಕೃತ ಸಾಹಿತ್ಯಕ್ಕೆ ತನ್ನದೇ ಆದ ಘನತೆ ಇದೆ. ಅದರ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರು.
ಮೇಲುಕೋಟೆಯ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದ ವತಿಯಿಂದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವಿಶಿಷ್ಟಾದ್ವೈತದ – ನಯಚಿಂತನಂ ’ ಎಂಬ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ದೊಡ್ಡ ಕ್ರಾಂತಿ ಮಾಡಿದ್ದರು
ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್ ಕುಲಸಚಿವ ಡಾ.ಎಸ್.ಕುಮಾರ್ ಮಾತನಾಡಿ, ಶತಮಾನದ ಹಿಂದೆ ಬಹು ದೊಡ್ಡ ಕ್ರಾಂತಿಯನ್ನೇ ಮಾಡಿದ್ದ ಶ್ರೀ ರಾಮಾನುಜಾಚಾರ್ಯರ ತತ್ವ, ಸಿದ್ಧಾಂತಗಳ ಬಗ್ಗೆ ಇಂದಿನ ಸಮಾಜಕ್ಕೆ ಅರಿವು ಮೂಡಿಸಬೇಕಿದೆ ಎಂದರು. ಶ್ರೀ ರಾಮಾನುಜರ ವಿಚಾರ ಲಹರಿಗಳು, ವೇದಾಂತ ದರ್ಶನ, ಅವರ ಗ್ರಂಥಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಚಿಂತನೆ, ಸಿದ್ಧಾಂತಗಳ ಕೊಡುಗೆಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿ ನಮ್ಮ ಸಂಸತ್‌ನಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದಕ್ಕೆ ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯ ಬೆಂಬಲ ನೀಡಿರುವುದು ಶ್ಲಾಘನೀಯ ಎಂದು ಕುಮಾರ್ ಹೇಳಿದರು.

ಕುಲಪತಿ ಸಹಕಾರ ಅನನ್ಯ
ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ.ಡಿ.ಪಿ. ಮಧುಸೂದನಾಚಾರ್ಯ ಮಾತನಾಡಿ, ಮೈಸೂರು ವಿವಿ ಕುಲಪತಿಗಳು ವೇದಾಂತ,ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರದ ಸೇವೆಗೆ ಸದಾ ಚೈತನ್ಯ ತುಂಬಿ ಪ್ರೋತ್ಸಾಹ ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದರು. ಮೈಸೂರಿನ ಶ್ರೀಮನ್ಮಹಾರಾಜ ಸಂಸ್ಕೃತ ಮಹಾಪಾಠ ಶಾಲೆಯ ಪ್ರಾಂಶುಪಾಲ ಡಾ. ಬಿ.ಸತ್ಯನಾರಾಯಣ, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿವೃತ್ತ ಉಪನಿರ್ದೇಶಕ ವಿದ್ವಾನ್ ಡಾ.ಟಿ.ವಿ ಸತ್ಯನಾರಾಯಣ, ಡಾ. ಶ್ರೀನಿಧಿ ಆಚಾರ್ಯ ಪ್ಯಾಟಿ , ಕೃಷ್ಣ ನಾಗಸಂಪಿಗೆ ಇತರರು ಇದ್ದರು. ಸಂಪನ್ಮೂಲ ವ್ಯಕ್ತಿಗಳು ವಿಚಾರ ಮಂಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post