ಕಲ್ಪ ಮೀಡಿಯಾ ಹೌಸ್ | ಮೈಸೂರು |
ಗ್ರಂಥ ಸಂಪಾದನೆ ಶಾಸ್ತçದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರಿಗೆ ಹೆಚ್ಚಿನ ಅಧ್ಯಯನದ ಅವಶ್ಯಕತೆ ಇದೆ ಎಂದು ಹಿರಿಯ ವಿದ್ವಾಂಸ ಡಾ. ಎಸ್. ಜಗನ್ನಾಥ ಹೇಳಿದರು.
ಪ್ರಾಚ್ಯವಿದ್ಯಾ ಸಂಶೋಧನಾಲಯ (ಒಆರ್‌ಐ), ಇಂದಿರಾಗಾAಧಿ ರಾಷ್ಟಿçÃಯ ಕಲಾ ಕೇಂದ್ರ ವತಿಯಿಂದ ನಗರದ ಮಾನಸ ಗಂಗೋತ್ರಿಯ ವಿಜ್ಞಾನ ಭವನ ಸಭಾಂಗಣದಲ್ಲಿ ಬುಧವಾರ `ಗ್ರಂಥ ಸಂಪಾದನ ಶಾಸ್ತ್ರದ ಪರಿಚಯ’ ವಿಷಯದ ಕುರಿತು ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವ ವಿದ್ಯಾಲಯದ ಕುಲಸಚಿವ ಪ್ರೊ. ನಾಗೇಶ ವಿ. ಬೆಟ್ಟಕೋಟೆ ಅವರು ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿರುವ ಗ್ರಂಥಗಳು ಸಂಶೋಧಕರಿಗೆ ಸರಳವಾಗಿ ಲಭ್ಯವಾಗಬೇಕು. ಲಿಪಿಗಳ ಸಂಗ್ರಹ ಹಾಗೂ ಕಲಿಸುವ ಮಹತ್ವದ ಕಾರ್ಯನಿರ್ವಹಿಸುತ್ತಿರುವ ಪ್ರಾಚ್ಯವಿದ್ಯಾ ಸಂಶೋಧನಾಲಯಕ್ಕೆ ಸರ್ಕಾರದಿಂದ ಹೆಚ್ಚುವರಿ ಆರ್ಥಿಕ ನೆರವು ದೊರೆಯಬೇಕು ಎಂದರು.

Also read: ಜಿಲ್ಲೆಯಲ್ಲಿ ಚುನಾವಣಾ ಕಂಟ್ರೋಲ್ ರೂಂ ಸ್ಥಾಪನೆ: ಇಲ್ಲಿದೆ ದೂರವಾಣಿ ಸಂಖ್ಯೆಗಳ ವಿವರ












Discussion about this post