ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರಿನ #Mysore ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಶುಕ್ರವಾರ ಉತ್ಥಾನ ದ್ವಾದಶಿ #UttanaDwadashi ಆಚರಣೆ ಸಂಭ್ರಮದಿಂದ ನೆರವೇರಿತು.
ದ್ವಾದಶಿ ನಿಮಿತ್ತ ಮುಂಜಾನೆ 5ಕ್ಕೆ ಸುಪ್ರಭಾತ ಸೇವೆಯೊಂದಿಗೆ ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ #SosaliSwamiji ಸಂಸ್ಥಾನ ಪೂಜೆ ನೆರವೇರಿಸಿದರು.
ವಿದ್ಯಾಪೀಠದ ವಿದ್ಯಾರ್ಥಿಗಳ ತಂಡದಿಂದ ವೇದ- ಮಂತ್ರ ಘೋಷ, ಪಾರಾಯಣದಿಂದ ಆರಂಭಗೊಂಡ ಚಟುವಟಿಕೆಗಳಲ್ಲಿ ಹಿರಿಯ ವಿದ್ವಾಂಸರೂ ಪಾಲ್ಗೊಂಡಿದ್ದರು. ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಸಂಸ್ಥಾನ ಪೂಜೆ ನಂತರ ತುಳಸೀ ಕಟ್ಟೆಗೆ #TulasiPooje ವಿಶೇಷ ಆರತಿಗಳನ್ನು ಬೆಳಗಿದರು.
ತುಳಸಿ ಸಂಕೀರ್ತನೆ
ವಿದ್ಯಾಪೀಠದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಮ್ಮುಖ ಸ್ವಾಮೀಜಿ ಸಂಕೀರ್ತನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಕೃಷ್ಣನ ಕುರಿತಾದ ಗೀತೆಗಳನ್ನು ಹಾಡುತ್ತಾ ತುಳಸಿ #Tulasi ಬೃಂದಾವನದ ಸುತ್ತ ವಿದ್ಯಾರ್ಥಿಗಳು, ಭಕ್ತರು ಮತ್ತು ವಿದ್ಯಾಶ್ರೀಶ ತೀರ್ಥರು ಪ್ರದಕ್ಷಿಣೆ ಹಾಕಿ ನಮಸ್ಕರಿಸಿದರು.
ತುಳಸಿ- ಧಾತ್ರಿಯರ (ನೆಲ್ಲಿಯ) ಪೂಜೆ, ತುಳಸಿ ವಿವಾಹವನ್ನು #TulasiVivaha ನೆರವೇರಿಸುವ ಕಾರ್ಯಕ್ಕೆ ಶ್ರೀಗಳು ನೇತೃತ್ವ ವಹಿಸಿದ್ದರು. ನಂತರ ಶ್ರೀಗಳು ಮಠದ ಗೋಶಾಲೆಯ #Goshale ಭಾರತೀಯ ಗೋವಿನ ತಳಿಗಳಿಗೆ ಪೂಜೆ ಮಾಡಿ ಗೋಗ್ರಾಸ ಸಮರ್ಪಣೆ ಮಾಡಿದರು. ನೂರಾರು ಭಕ್ತರು ಇದಕ್ಕೆ ಸಾಕ್ಷಿಯಾದರು. ನಂತರ ಭಕ್ತರಿಗೆ ತೀರ್ಥ ಪ್ರಸಾದ, ದ್ವಾದಶಿ ಪಾರಣೆ ನಡೆಯಿತು.
ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯ, ತಿರುಮಲ-ತಿರುಪತಿ ಆಡಳಿತ ಮಂಡಳಿ ನಿಕಟಪೂರ್ವ ಸದಸ್ಯ ಡಿ.ಪಿ. ಅನಂತಾಚಾರ್ಯ, ಗುರುಗಳ ಆಪ್ತ ಕಾರ್ಯದರ್ಶಿ ಅಭಿಜಿತ್, ಪಂಡಿತ ಪ್ರಣವ ಆಚಾರ್ಯ, ವಿದ್ವಾನ್ ಬಿದರಹಳ್ಳಿ ಕೃಷ್ಣಾಚಾರ್ಯ, ನಾಗಸಂಪಿಗೆ ಕೃಷ್ಣಾಚಾರ್ಯ ಸೇರಿದಂತೆ ವಿದ್ಯಾಪೀಠದ ಉಪನ್ಯಾಸಕರು, ವಿದ್ಯಾರ್ಥಿಗಳು ಇದಕ್ಕೆ ಸಾಕ್ಷಿಯಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post