No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು: ಸಚಿವ ಈಶ್ವರ ಖಂಡ್ರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2024
in ಮೈಸೂರು
0
ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು: ಸಚಿವ ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ಪ್ರತಿಪಾದಿಸಿದ್ದಾರೆ.

ಮೈಸೂರಿನ ಮುಕ್ತಗಂಗೋತ್ರೀಯ ಸಭಾಂಗಣದಲ್ಲಿಂದು ರಾಜೀವ್ ಸ್ನೇಹ ಬಳಗ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪೂರ್ವಿಕರು ಗಿಡ, ಮರ, ಬೆಟ್ಟ, ಗುಡ್ಡ, ನದಿಗಳನ್ನು ಪೂಜಿಸುತ್ತಿದ್ದರು. ಬೆಟ್ಟದ ಮೇಲೆ ದೇವಾಲಯ ಕಟ್ಟಿ ಬೆಟ್ಟ ನಾಶವಾಗದಂತೆ ತಡೆದಿದ್ದಾರೆ. ಪ್ರಕೃತಿ ಸಮತೋಲನ ಕಾಪಾಡಿದ್ದಾರೆ ಎಂದರು.
ಪ್ರಕೃತಿ, ಪರಿಸರವನ್ನು ನಾವು ರಕ್ಷಿಸಿದರೆ, ಪ್ರಕೃತಿ, ಪರಿಸರ ನಮ್ಮನ್ನು ರಕ್ಷಿಸುತ್ತದೆ. ಇಂದು ಜಗತ್ತಿನ ಮುಂದಿರುವ ಅತಿ ದೊಡ್ಡ ಸವಾಲು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಾಗಿದೆ. ಹವಾಮಾನ ಬದಲಾವಣೆಯಿಂದ ಋತುಮಾನಗಳಲ್ಲಿ ಬದಲಾವಣೆ ಆಗುತ್ತಿದೆ. ಮಳೆಗಾಲದಲ್ಲಿ ಮಳೆಯಾಗುತ್ತಿಲ್ಲ, ಒಂದೇ ದಿನದಲ್ಲಿ ಒಂದು ತಿಂಗಳ ಪೂರ್ತಿ ಮಳೆ ಸುರಿದು ಅನಾಹುತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು ಎಂದರು.

ಜಾಗತಿಕ ತಾಪಮಾನ ಏರಿಕೆಗೆ ಇಂಗಾಲದ ಡೈಆಕ್ಸೈಡ್, ಹಸಿರು ಮನೆ ಅನಿಲಗಳು ಕಾರಣ. ನಾವು ಹೆಚ್ಚು ಹೆಚ್ಚು ಗಿಡ, ಮರ ಬೆಳೆಸಿದರೆ ಮಾತ್ರವೇ ತಾಪಮಾನ ಏರಿಕೆ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ರಾಜೀವ್ ಸ್ನೇಹ ಬಳಗ ಮಾಡುತ್ತಿರುವ ಕಾರ್ಯ ಅಭಿನಂದನಾರ್ಹ ಮತ್ತು ಅನುಕರಣೀಯ ಎಂದರು.
5 ಕೋಟಿ ಸಸಿ ನೆಟ್ಟ ಸಾಧನೆ :
ಮರಗಿಡಗಳ ಮಹತ್ವವನ್ನು ರಾಜ್ಯ ಸರ್ಕಾರ ಮನಗಂಡಿದ್ದು, ಕಳೆದ ವರ್ಷ ತಾವು ಸಚಿವರಾದ ತರುವಾಯ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿ, 5 ಕೋಟಿ 40 ಲಕ್ಷಕ್ಕೂ ಅಧಿಕ ಸಸಿ ನೆಟ್ಟು ಗುರಿ ಮಾಡಿದ ಸಾಧನೆ ಮಾಡಲಾಗಿದೆ. ಈಗ ನೆಟ್ಟ ಸಸಿಗಳ ಪೈಕಿ ಎಷ್ಟು ಬದುಕಿ ಉಳಿದಿವೆ ಎಂದು ತಿಳಿಯಲು ಜಿಯೋ ಟ್ಯಾಗಿಂಗ್ ಮತ್ತು ಆಡಿಟ್ ಮಾಡಲಾಗುತ್ತಿದೆ. ಈ ವರದಿಯನ್ನು 3 ತಿಂಗಳೊಳಗೆ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದರು.

Also read: ಎಕ್ಸ್’ಪ್ರೆಸ್ ರೈಲಿಗೆ ಗೂಡ್ಸ್ ರೈಲು ಢಿಕ್ಕಿ | ಐವರು ಸಾವು | ಹಲವರಿಗೆ ಗಾಯ | ಘಟನೆ ನಡೆದಿದ್ದೆಲ್ಲಿ?

ಈ ಬಾರಿಯೂ 5 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ. ಪರಿಸರ ಪ್ರೇಮಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಲಿನಲ್ಲಿ ಸಸಿ ನೆಡಲು 100 ಕೋಟಿ ರೂ. ಹೆಚ್ಚುವರಿಯಾಗಿ ನೀಡಿದ್ದಾರೆ ಎಂದರು.

ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಪರಿಸರ, ಪ್ರಕೃತಿ ಉಳಿಸಬೇಕು. ಮನೆಯ ಮುಂದೆ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು ಎಂದರು.

ಮುಖ್ಯಮಂತ್ರಿಯವರು ಮೈಸೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಿದ್ದಾರೆ. ನಮ್ಮ ಪರಿಸರ ಇಲಾಖೆ ಪ್ಲಾಸ್ಟಿಕ್ ಗೆ ಕಡಿವಾಣ ಹಾಕಲು ಪ್ರಯತ್ನಿಸುತ್ತಿದೆ. ಇದಕ್ಕೆ ಜನರೂ ಕೈಜೋಡಿಸಬೇಕು ಮತ್ತು ತಾವು ಏಕ ಬಳಕೆ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ಶಪತ ಮಾಡಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಿರಿ ಸಂವರ್ಧನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕುಂದೂರು ಮಠದ ಶ್ರೀ ಶರತ್ ಚಂದ್ರ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಮಾಜಿ ಸಚಿವ ತನ್ವಿರ್ ಸೇಠ್, ಹಿರಿಯ ಪತ್ರಕರ್ತ ಅಂ.ಶಿ. ಪ್ರಸನ್ನ ಮತ್ತಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMinister Eshwar KhandremysoreNews in KannadaNews Kannadaಮೈಸೂರುಸಚಿವ ಈಶ್ವರ ಬಿ ಖಂಡ್ರೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಕ್ಸ್’ಪ್ರೆಸ್ ರೈಲಿಗೆ ಗೂಡ್ಸ್ ರೈಲು ಢಿಕ್ಕಿ | ಐವರು ಸಾವು | ಹಲವರಿಗೆ ಗಾಯ | ಘಟನೆ ನಡೆದಿದ್ದೆಲ್ಲಿ?

Next Post

ಸದನದಲ್ಲಿ ಜನರ ಧ್ವನಿಯಾಗಿ, ಪ್ರಾಮಾಣಿಕ ಸೇವೆ: ವಿಪ ಸದಸ್ಯ ಧನಂಜಯ ಸರ್ಜಿ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸದನದಲ್ಲಿ ಜನರ ಧ್ವನಿಯಾಗಿ, ಪ್ರಾಮಾಣಿಕ ಸೇವೆ: ವಿಪ ಸದಸ್ಯ ಧನಂಜಯ ಸರ್ಜಿ ಭರವಸೆ

ಸದನದಲ್ಲಿ ಜನರ ಧ್ವನಿಯಾಗಿ, ಪ್ರಾಮಾಣಿಕ ಸೇವೆ: ವಿಪ ಸದಸ್ಯ ಧನಂಜಯ ಸರ್ಜಿ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Bengaluru to Shivamogga Train Updates

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

June 13, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL