No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಗವಿಸಿದ್ಧೇಶ್ವರ ಶ್ರೀ ಆಯ್ಕೆ

kalpa News by kalpa News
September 25, 2026
in ರಾಷ್ಟ್ರೀಯ
0
Mysusu Dasara Gavisiddheshwara Swamiji Inauguration copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಾಡಿನ ಸಾಂಸ್ಕೃತಿಕ ಪರಂಪರೆ, ಐತಿಹಾಸಿಕ ವೈಭವ ಮತ್ತು ರಾಜಮರ್ಯಾದೆಯ ಪ್ರತೀಕವಾಗಿರುವ ವಿಶ್ವವಿಖ್ಯಾತ (Mysuru Dasara) ಮೈಸೂರು ದಸರಾ ಮಹೋತ್ಸವ–2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Gavisiddheshwara Swamiji ಚಾಲನೆ ನೀಡಲಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಅಧಿಕೃತವಾಗಿ ಪ್ರಕಟಿಸಿದ್ದು, ಅಕ್ಟೋಬರ್ 11ರಿಂದ ಅಕ್ಟೋಬರ್ 21ರವರೆಗೆ ಒಟ್ಟು 11 ದಿನಗಳ ಕಾಲ ಮೈಸೂರು ದಸರಾ ಮಹೋತ್ಸವವನ್ನು ವೈಭವೋಪೇತವಾಗಿ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

dk shivakumar led karnataka government 100 days celebration

ಅ.11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ

ದಸರಾ ಮಹೋತ್ಸವಕ್ಕೆ ಅಕ್ಟೋಬರ್ 11ರಂದು ಭಾನುವಾರ ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಧ್ಯುಕ್ತ ಚಾಲನೆ ದೊರೆಯಲಿದೆ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

ಚಾಮುಂಡೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಆರಂಭವಾಗುವ ದಸರಾ ಉತ್ಸವವು ಮುಂದಿನ 11 ದಿನಗಳ ಕಾಲ ಮೈಸೂರಿನಾದ್ಯಂತ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

Mysuru Dasara : ಅ.20ರಂದು ಆಯುಧ ಪೂಜೆ

ದಸರಾ ಮಹೋತ್ಸವದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಆಯುಧ ಪೂಜೆಯನ್ನು ಅಕ್ಟೋಬರ್ 20ರಂದು ಸಾಂಪ್ರದಾಯಿಕವಾಗಿ ನೆರವೇರಿಸಲಾಗುವುದು. ನಾಡಿನ ವಿವಿಧೆಡೆ ಆಯುಧ ಪೂಜೆ ಹಾಗೂ ವಾಹನ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.Kalahamsa Infotech private limited

ಅ.21ರಂದು ಜಂಬೂ ಸವಾರಿ, ಪಂಜಿನ ಕವಾಯತು

ಅಕ್ಟೋಬರ್ 21ರಂದು ಬುಧವಾರ ವಿಜಯದಶಮಿ ಆಚರಿಸಲಾಗುತ್ತಿದ್ದು, ಅಂದು ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಅದ್ಧೂರಿಯಾಗಿ ನಡೆಯಲಿದೆ. ಅಂಬಾರಿ ಹೊತ್ತ ಆನೆಗಳ ರಾಜಗಾಂಭೀರ್ಯದ ಮೆರವಣಿಗೆ, ವಿವಿಧ ಕಲಾತಂಡಗಳ ಪ್ರದರ್ಶನ, ಸ್ತಬ್ಧಚಿತ್ರಗಳು ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಜಂಬೂ ಸವಾರಿಗೆ ಮೆರುಗು ನೀಡಲಿವೆ.

ವಿಜಯದಶಮಿ ದಿನದ ಸಂಜೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ದಸರಾ ಮಹೋತ್ಸವದ ಸಂಭ್ರಮಕ್ಕೆ ಅದ್ಧೂರಿ ತೆರೆ ಬೀಳಲಿದೆ.

‘ನಡೆದಾಡುವ ದೇವರು’, ‘ಜಲಋಷಿ’ ಎಂದೇ ಗೌರವ

ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿರುವ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನದ ಪ್ರಸ್ತುತ ಪೀಠಾಧಿಪತಿಗಳಾಗಿದ್ದಾರೆ. ಅವರು ಮಠದ 18ನೇ ಪೀಠಾಧಿಪತಿಗಳಾಗಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ತಮ್ಮ ಸರಳ ಜೀವನಶೈಲಿ, ಸಾಮಾಜಿಕ ಕಳಕಳಿ, ಜನಪರ ಸೇವೆ ಹಾಗೂ ದಾಸೋಹ ಪರಂಪರೆಯ ಮೂಲಕ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ರಾಜ್ಯದಾದ್ಯಂತ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಸಮಾಜಮುಖಿ ಕಾರ್ಯಗಳು ಹಾಗೂ ನೀರಿನ ಸಂರಕ್ಷಣೆ ಸೇರಿದಂತೆ ವಿವಿಧ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅವರನ್ನು ಭಕ್ತರು ಹಾಗೂ ಸಾರ್ವಜನಿಕರು ಗೌರವದಿಂದ ‘ನಡೆದಾಡುವ ದೇವರು’ ಮತ್ತು ‘ಜಲಋಷಿ’ ಎಂದು ಕರೆಯುತ್ತಾರೆ.PES Shivamogga

ಸಾಂಸ್ಕೃತಿಕ ವೈಭವಕ್ಕೆ ಸಜ್ಜಾಗುತ್ತಿರುವ ಮೈಸೂರು

ಮೈಸೂರು ದಸರಾ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಕರ್ನಾಟಕದ ಕಲೆ, ಸಂಸ್ಕೃತಿ, ಜಾನಪದ ಪರಂಪರೆ ಮತ್ತು ಪ್ರವಾಸೋದ್ಯಮವನ್ನು ವಿಶ್ವದ ಮಟ್ಟಿಗೆ ಪರಿಚಯಿಸುವ ಪ್ರಮುಖ ಉತ್ಸವವಾಗಿದೆ. ದಸರಾ ಹಿನ್ನೆಲೆಯಲ್ಲಿ ಮೈಸೂರು ನಗರವು ವಿಶೇಷವಾಗಿ ಅಲಂಕೃತಗೊಳ್ಳಲಿದ್ದು, ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ವೈವಿಧ್ಯಮಯ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಅನುಭವಗಳನ್ನು ಒದಗಿಸಲಿದೆ.

ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ಆರಂಭವಾಗುವ ಉತ್ಸವವು ಅಕ್ಟೋಬರ್ 21ರ ವಿಜಯದಶಮಿ ದಿನದ ಜಂಬೂ ಸವಾರಿ ಹಾಗೂ ಪಂಜಿನ ಕವಾಯತಿನೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಳ್ಳಲಿದೆ. ಈ ಮೂಲಕ ಮತ್ತೊಮ್ಮೆ ಮೈಸೂರು ದಸರಾ ನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕವಾಗಿ ವಿಶ್ವದ ಗಮನ ಸೆಳೆಯಲು ಸಜ್ಜಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Christ King

Kalpa News Advertising Disclaimer

Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

48 ಗಂಟೆಯೊಳಗೆ ರಾಜೀನಾಮೆ ನೀಡಿ! CEC ಜ್ಞಾನೇಶ್ ಕುಮಾರ್’ಗೆ CJP ಗಡುವು | ಪ್ರತಿಭಟನೆ ಎಚ್ಚರಿಕೆ

Next Post

ಸೌಜನ್ಯ ಹತ್ಯೆ ಪ್ರಕರಣ | ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ | ರಾಜ್ಯ ಸರ್ಕಾರ ಆದೇಶ

kalpa News

kalpa News

Next Post
Soujanya Murder Case govt forms sit shashikumar head

ಸೌಜನ್ಯ ಹತ್ಯೆ ಪ್ರಕರಣ | ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ | ರಾಜ್ಯ ಸರ್ಕಾರ ಆದೇಶ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL