ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಗರದ ವಿ ಆರ್ ಟ್ರಸ್ಟ್, ಡಾ. ಸುಶ್ರುತ್ ಗೌಡ ಸ್ನೇಹ ಬಳಗ, ಡಾ. ರಾಜೇಶ್ ಕಣ್ಣಿನ ಆಸ್ಪತ್ರೆ ಹಾಗೂ ಲಯನ್ಸ್ ಕ್ಲಬ್ ಜೀವಾಧಾರ ರಕ್ತ ನಿಧಿ ಸಹಯೋಗದಲ್ಲಿ ಆಗಸ್ಟ್ 2ರಂದು ಭಾನುವಾರ ಉಚಿತ ಸೂಪರ್ ಸ್ಪೆಷಾಲಿಟಿ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ನಗರದ ಎಸ್.ಎಂ. ಕೃಷ್ಣ ಮೆಮೋರಿಯಲ್ ನ್ಯೂರೋ ಜೋನ್, ಗೋಕುಲಂ ಇಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದೆ.
Also read>> ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ನೂತನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ
ಖ್ಯಾತ ವಾಗ್ಮಿ ಹಾಗೂ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಎಂ. ಕೃಷ್ಣೇಗೌಡ ಅವರು ಶಿಬಿರವನ್ನು ಉದ್ಘಾಟಿಸಲಿದ್ದು, ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ ಹಾಗೂ ತಜ್ಞ ವೈದ್ಯರ ಸಲಹೆಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಶಿಬಿರದಲ್ಲಿ ಲಭ್ಯವಿರುವ ಸೇವೆಗಳು:
- ರಕ್ತದೊತ್ತಡ ತಪಾಸಣೆ
- ಸಕ್ಕರೆ ಕಾಯಿಲೆ (ಡಯಾಬಿಟಿಸ್) ತಪಾಸಣೆ
- ನ್ಯೂರಾಲಜಿ ತಪಾಸಣೆ
- ಹೃದಯ ತಪಾಸಣೆ
- ಕಣ್ಣಿನ ತಪಾಸಣೆ
- ತೂಕ ಹಾಗೂ ಬಿ.ಎಂ.ಐ. ತಪಾಸಣೆ
- ರುಮಾಟಾಲಜಿ ಸಲಹೆ
- ಗ್ಯಾಸ್ಟ್ರೋ ಎಂಟರಾಲಜಿ ಸಲಹೆ
- ಜೀರ್ಣಾಂಗ ಸಂಬಂಧಿ ಸಮಸ್ಯೆಗಳ ಕುರಿತು ತಜ್ಞರ ಸಲಹೆ
- ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ಆರೋಗ್ಯ ಸಲಹೆ
ವಿವಿಧ ವಿಭಾಗಗಳ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9380379840.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










