ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಾರಿಗೆ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಮೈಸೂರಿನ (Mysuru) ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಎನ್.ಆರ್. ಮೊಹಲ್ಲಾ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಪುತ್ರಿ ವೈಷ್ಣವಿ (17) ಎಂದು ಗುರುತಿಸಲಾಗಿದೆ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
Also Read>> ಹಾಸನ: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿದ ರೈಲ್ವೆ ರಕ್ಷಣಾ ಪಡೆ
ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅಪಘಾತ
ವೈಷ್ಣವಿ ಟ್ಯೂಷನ್ ಮುಗಿಸಿಕೊಂಡು ತಂದೆ ವೆಂಕಟೇಶ್ ಅವರೊಂದಿಗೆ ಸ್ಕೂಟರ್ನಲ್ಲಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಚಾಮರಾಜ ವೃತ್ತದ ಸಮೀಪ ಸ್ಕೂಟರ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ನಲ್ಲಿದ್ದ ವೈಷ್ಣವಿ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾಳೆ. ಮಗಳ ಸಾವಿನಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಪರಿಚಿತರು ಸಂತಾಪ ಸೂಚಿಸಿದ್ದಾರೆ.
Mysuru: ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











