ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಬ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ನಗರದ ದಟ್ಟಗಳ್ಳಿ 4ನೇ ಹಂತದ ಸಮೀಪ ಇರುವ ಪ್ರಸಿದ್ಧ ‘ಫಾಕ್ಸ್ ಜೆನ್’ ಪಬ್‌ನಲ್ಲಿ ಈ ದುರಂತ ಸಂಭವಿಸಿದೆ. ಸಾಹೀನ್ ಹಾಗೂ ಪ್ರಕಾಶ್ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ.
Also Read>> ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ
ಪಬ್‌ನಲ್ಲಿ ಎಂದಿನಂತೆ ವಹಿವಾಟು ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಒಳಾಂಗಣ ಅಲಂಕಾರ ಹಾಗೂ ದಹನಕಾರಿ ವಸ್ತುಗಳ ಕಾರಣದಿಂದ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿದೆ ಎಂದು ತಿಳಿದುಬಂದಿದೆ. ದಟ್ಟ ಹೊಗೆ ಮತ್ತು ಜ್ವಾಲೆಗಳು ಪಬ್‌ನ್ನು ಸಂಪೂರ್ಣವಾಗಿ ಆವರಿಸಿಕೊಂಡ ಕಾರಣ, ಒಳಗಿದ್ದವರಿಗೆ ಹೊರಬರುವ ಅವಕಾಶ ಸಿಗಲಿಲ್ಲ.
ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದು, ಪಬ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಘಟನೆಯಲ್ಲಿ ಏಳು ಮಂದಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
Also Read>> ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ
ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್ ಅಥವಾ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















