ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಎನ್.ಜಿ. ನಾಗರಾಜ್ ಅವರು ಇಂದು ಪದಗ್ರಹಣ ಮಾಡಿದರು.
ಸೂಡಾ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ದೇವರ ಪೂಜೆ ಸಲ್ಲಿಸಿದ ನಂತರ ನೂತನ ಅಧ್ಯಕ್ಷರು ಪದಗ್ರಹಣ ಮಾಡಿದರು. ನಂತರ ವೇದಿಕೆ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮೇಯರ್ ಸುನೀತಾ ಅಣ್ಣಪ್ಪ, ವಿಧಾನ ಪರಿಷತ್ ಶಾಸಕರಾದ ಎಸ್. ರುದ್ರೇಗೌಡ್ರು, ಡಿ.ಎಸ್. ಅರುಣ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ. ಶ್ರೀನಾಥ್, ಶಿವರಾಜ್, ಧರ್ಮ ಪ್ರಸಾದ್, ಸಣ್ಣ ಕೈಗಾರಿಕಾ ನಿಗಮದ ರಾಜ್ಯ ಉಪಾಧ್ಯಕ್ಷ ಎಸ್. ದತ್ತಾತ್ರಿ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ರಾಮಯ್ಯ, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಬಳ್ಳಕೆರೆ, ಮೋಹನ್ ರೆಡ್ಡಿ, ಎಸ್.ಎಸ್. ಜ್ಯೋತಿಪ್ರಕಾಶ್, ಸೂಡಾ ನೂತನ ಸದಸ್ಯರಾದ ಭದ್ರಾವತಿಯ ವಿ. ಕದಿರೇಶ್, ಚಂದ್ರಶೇಖರ್ಛ್ ಹೇಮಾವತಿ ವಿಶ್ವನಾಥ ರಾವ್, ಜಿ. ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಶುಭ ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















