ಕಲ್ಪ ಮೀಡಿಯಾ ಹೌಸ್ | ಎನ್‌ಆರ್‌ಪುರ/ಶಿವಮೊಗ್ಗ |
ಖಾಸಗಿ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬಸ್‌ಗಳು ನುಜ್ಜುಗುಜ್ಜಾಗಿ ಹಲವರಿಗೆ ಗಂಭೀರ ಗಾಯಗಳಾದ ಘಟನೆ ಇಂದು ಸಂಜೆ ನಡೆದಿದೆ.
ಎನ್‌ಆರ್ ಪುರ ಸಮೀಪದ ಉಂಬ್ಳೆಬೈಲು ತೋಟದ ಕೆರೆ ಕ್ರಾಸ್ ಬಳಿ ಶೃಂಗೇರಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿವಮೊಗ್ಗದಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಕೆಬಿ ಬಸ್ ನಡುವೆ ಸಂಭವಿಸಿದ ಅಪಘಾತದ ತೀವ್ರತೆಗೆ ಬಹುತೇಕ ಎರಡೂ ಬಸ್ ಜಖಂಗೊಂಡಿದೆ. ಬಸ್‌ಗಳಲ್ಲಿದ್ದ ಸುಮಾರು 40 ಪ್ರಯಾಣಿಕರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ಇವರನ್ನೆಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಂಗಾ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post