No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ: ಕೇಂದ್ರ ಸಚಿವ ಕುಮಾರಸ್ವಾಮಿ ನೇರ ಆರೋಪ

ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಸಣ್ಣ, ಆಕಸ್ಮಿಕ ಘಟನೆ ಎಂದ ಗೃಹ ಸಚಿವರಿಗೆ ತರಾಟೆ

kalpa News by kalpa News
September 14, 2024
in ಮಂಡ್ಯ
0
ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಾಗಮಂಗಲ(ಮಂಡ್ಯ)  |

ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ; ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ನೇರ ಆರೋಪ ಮಾಡಿದರು.

ನಾಗಮಂಗಲದ ಗಲಭೆ ಪೀಡಿತ #Nagamangala Riots ಪ್ರದೇಶಗಳಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.
ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್ ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಯಿತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ. ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿ ಮಾಡಲಾಗಿದೆಯೋ ಗೊತ್ತಿಲ್ಲ ಎಂದು ಕೇಂದ್ರ ಸಚಿವರು ಅನುಮಾನ ವ್ಯಕ್ತಪಡಿಸಿದರು.

ಇಂಥ ಗಲಾಟೆಗಳನ್ನು ಮಾಡಿಸುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದರು.

ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದು ದೂರಿದ ಅವರು; ಪೊಲೀಸರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಕೇಂದ್ರ ಸಚಿವರು ಆಗ್ರಹಪಡಿಸಿದರು.
ಅಧಿಕಾರಿಗಳ ನಡೆ ಸಂಶಯಾಸ್ಪದ

ಗಲಭೆಯ ಎಫ್ಐಆರ್ ಪ್ರತಿಯನ್ನು ಹಿಡಿದು ಮಾತನಾಡಿದ ಸಚಿವರು; ಆರೋಪ ಪಟ್ಟಿ ಸಂಪೂರ್ಣ ಲೋಪದಿಂದ ಕೂಡಿದೆ. ಪೊಲೀಸರ ವರ್ತನೆ ಸಂಶಯಾಸ್ಪದವಾಗಿದೆ ಎಂದು ಹೇಳಿದರು.

ಕೇವಲ 100-150 ಜನ ಇದ್ದ ಮೆರವಣಿಗೆಗೆ ಸ್ಥಳೀಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗಿಲ್ಲ. ಸ್ಥಳದಲ್ಲಿ ಗಲಾಟೆ ಆರಂಭವಾಗುವುದಕ್ಕೆ ಕೇವಲ ಹತ್ತು ನಿಮಿಷಗಳ ಮೊದಲು ಮೀಸಲು ಪೊಲೀಸ್ ಪಡೆಯನ್ನು ಬೇರೆಡೆಗೆ ಕಳಿಸಲಾಗಿದೆ. ಅಲ್ಲದೆ; ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಸ್ಥಳದಲ್ಲಿಯೇ ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾದರೆ, ಈ ಇಬ್ಬರು ಅಧಿಕಾರಿಗಳು ಎಲಿದ್ದರು? ಮೀಸಲು ಪಡೆಯನ್ನು ಬೇರೆಡೆಗೆ ಕಳಿಸಿದ್ದು ಯಾಕೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.
ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು?

ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್ ಗಳನ್ನು ಎಸೆಯಲಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಅಷ್ಟು ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್ ಗಳು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಹತ್ತೇ ನಿಮಿಷದಲ್ಲಿ ಇವನ್ನೆಲ್ಲಾ ಸಂಗ್ರಹ ಮಾಡಿಕೊಳ್ಳಲು ಸಾಧ್ಯವೇ? ಇಡೀ ಗಲಭೆಯ ರೀತಿಯನ್ನು ನೋಡಿದರೆ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ ಎಂದು ಕೇಂದ್ರ ಸಚಿವರು ಅನುಮಾನ ವ್ಯಕ್ತಪಡಿಸಿದರು.

ಗೃಹ ಸಚಿವರ ವಿರುದ್ಧ ಕಿಡಿ

ನಾಗಮಂಗಲ ಗಲಭೆಯನ್ನು ಸಣ್ಣ, ಆಕಸ್ಮಿಕ ಘಟನೆ ಎಂದು ಕರೆದಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವರು; ಇಷ್ಟೊಂದು ದೊಡ್ಡ ಗಲಭೆ ಆಗಿದೆ. ಯೋಜಿತವಾಗಿ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೂ ಇವರೂ ಸಣ್ಣ, ಆಕಸ್ಮಿಕ ಘಟನೆ ಎನ್ನುತ್ತಾರೆ, ಇವರನ್ನು ಗೃಹ ಸಚಿವರು ಎಂದು ಕರೆಯಬೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ಹುಬ್ಬಳ್ಳಿ-ಪುಣೆ | ಸೆ.16ರಿಂದ ವಂದೇ ಭಾರತ್ ಸಂಚಾರ | ಮಾರ್ಗದ ಬಗ್ಗೆ ಸಚಿವ ಜೋಶಿ ಮಹತ್ವದ ಹೇಳಿಕೆ

ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆಯನ್ನು ಸರಿ ಮಾಡಿಕೊಳ್ಳಬೇಕು. ಹಳೆ ಮೈಸೂರು ಭಾಗದಲ್ಲಿ ಎರಡೂ ಸಮುದಾಯದ ಜನರು ಸೌಹಾರ್ದತೆಯಿಂದ ಜೀವನ ಮಾಡುತ್ತಿದ್ದಾರೆ. ರಾಜಕೀಯಕ್ಕಾಗಿ ಜನರ ಬದುಕು ಛಿದ್ರ ಮಾಡಬೇಡಿ. ಇದು ಸಣ್ಣ ವಿಷಯ. ಇದಕ್ಕೆ ಮಹತ್ವ ಕೊಡುವುದು ಬೇಡ ಎನ್ನುತ್ತಾರೆ ಗೃಹ ಸಚಿವರು. ಈ ರೀತಿ ಹೇಳಿಕೆ ಮೂಲಕ ಜನರಿಗೆ ಯಾವ ಸಂದೇಶ ಕೊಡುತ್ತಾರೆ ಅವರು? ಮೆರವಣಿಗೆಗೆ ಅನುಮತಿ ಕೊಟ್ಟಿರುವುದೇ ನೀವು.

ಮೆರವಣಿಗೆಗೆ ಭದ್ರತೆ ಕೊಡಬೇಕಾದ ಹೊಣೆಯೂ ನಿಮ್ಮದೇ. ಘಟನೆ ಸ್ಥಳದಲ್ಲಿ ಆಗ ಎಷ್ಟು ಜನ ಪೊಲೀಸರನ್ನು ನಿಯೋಜನೆ ಮಾಡಿದ್ದಿರಿ? ನಿಮ್ಮ ಇನಸ್ಪೆಕ್ಟರ್ ಎಲ್ಲಿ ಇದ್ದರು. ಘಟನೆಗೂ ಮುನ್ನ ಇಲ್ಲಿದ್ದ ಮೀಸಲುಪಡೆ ವಾಹನವನ್ನು ವಾಪಸ್ ಕರೆಸಿಕೊಂಡಿದ್ದಾರೆ. ಘಟನೆ ನಡೆದ ಒಂದು ಗಂಟೆಗೆ ವಿಷಯ ಮಾಧ್ಯಮದವರಿಗೆ ಗೊತ್ತಾಗುತ್ತದೆ.

ಪೊಲೀಸರಿಗೆ ಯಾಕೆ ಗೊತ್ತಾಗಿಲ್ಲ? ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಅವರು ಒತ್ತಾಯ ಮಾಡಿದರು.

https://kalpa.news/wp-content/uploads/2024/04/VID-20240426-WA0008.mp4

ಅಧಿಕಾರಿ ಅಮಾನತು ಕಣ್ಣೊರೆಸುವ ತಂತ್ರ

ನಾನು ನಾಗಮಂಗಲಕ್ಕೆ ಬರುತ್ತೇನೆ ಎಂದು ಗುರುವಾರವೇ ಹೇಳಿದ್ದೆ. ಅಂದು ಸಂಜೆ ಬಿಜೆಪಿ ನಾಯಕರು ಸ್ಥಳಕ್ಕೆ ಬಂದಿದ್ದರು. ಅದಕ್ಕಾಗಿಯೇ ಇನ್ಸ್ಪೆಕ್ಟರ್ ಅಶೋಕ್ ರನ್ನು ಸಸ್ಪೆಂಡ್ ಮಾಡಿದ್ದಾರೆ. ಇದು ಕಣ್ಣೊರೆಸುವ ತಂತ್ರ ಎಂದ ಸಚಿವರು; ಮಸೀದಿ ಬಳಿ 10 ನಿಮಿಷ ಡಾನ್ಸ್ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡುತಿದ್ದರು? ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು. ಮೆರವಣಿಗೆ ವೇಳೆ ಇನಸ್ಪೆಕ್ಟರ್, ಡಿವೈಎಸ್ಪಿ ಯಾರೂ ಇರಲಿಲ್ಲ.

ಆದರೆ ಎಫ್ಐಆರ್ನಲ್ಲಿ ಅವರು ಇದ್ದರು ಎಂದು ಬರೆಯಲಾಗಿದೆ. ಇದು ಯಾವ ಜಾದು? ಎಂದು ಪ್ರಶ್ನಿಸಿದರು.

ಆತ ತ್ರಿಕಾಲಜ್ಞಾನಿಯೇ?

ದೂರು ನೀಡಿರುವ ಅಧಿಕಾರಿ ರವಿಗೆ ರಾತ್ರಿ 1.30ರಲ್ಲಿ ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಹೆಸರುಗಳು ಹೇಗೆ ಗೊತ್ತು? ಪೆಟ್ಟು ತಿಂದು ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಅಷ್ಟು ಜನರ ಹೆಸರುಗಳು ನೆನಪಾಗಿದ್ದು ಹೇಗೆ? ಆತನಿಗೆ ಎಷ್ಟು ನೆನಪಿನ ಶಕ್ತಿ ಇದೆ! ಆತನೇನು ತ್ರಿಕಾಲಜ್ಞಾನಿಯೇ? ಎಂದು ಕೇಂದ್ರ ಸಚಿವರು ಅಚ್ಚರಿ ವ್ಯಕ್ತಪಡಿಸಿದರು.

ಪ್ರತಿಯೊಂದರಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇಲ್ಲಿ ಅಮಾಯಕ ಜನರ ಬದುಕು ಬೀದಿಗೆ ಬಂದಿದೆ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್ಐಆರ್ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ರಾಜ್ಯದಲ್ಲಿದೆ. ಆಗಿರುವ ಲೋಪ ಒಪ್ಪಿಕೊಳ್ಳುವುದು ಬಿಟ್ಟು ಸಮುದಾಯಗಳ ನಡುವೆ ಕಂದಕ ತೊಡುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.

ನೊಂದವರಿಗೆ ಆರ್ಥಿಕ ನೆರವು

ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗಲಭೆಯಲ್ಲಿ ಆಸ್ತಿಪಾಸ್ತಿ, ಜೀವನೋಪಾಯ ಕಳೆದುಕೊಂಡ ಅನೇಕರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೊತ್ತದ ಹಣವನ್ನು ಅವರು ಪರಿಹಾರವಾಗಿ ನೀಡಿದರು.

ಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಅವರು ಹೇಳಿದರು.

ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿ ಅನೇಕ ಮುಖಂಡರು ಜತೆಯಲ್ಲಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: H D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNagamangala (Mandya)Nagamangala RiotsNews_in_KannadaNews_Kannadaಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಾಗಮಂಗಲ (ಮಂಡ್ಯ)ನಾಗಮಂಗಲದ ಗಲಭೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ-ಪುಣೆ | ಸೆ.16ರಿಂದ ವಂದೇ ಭಾರತ್ ಸಂಚಾರ | ಮಾರ್ಗದ ಬಗ್ಗೆ ಸಚಿವ ಜೋಶಿ ಮಹತ್ವದ ಹೇಳಿಕೆ

Next Post

ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

kalpa News

kalpa News

Next Post
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL