No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ನಾರದರ ಆದರ್ಶಗಳು ಪತ್ರಿಕೋದ್ಯಮಕ್ಕೆ ಪ್ರೇರಣೆಯಾಗಲಿ : ಅರುಣ್ ಕುಮಾರ್

ಕಾರಣಗಿರಿಯಲ್ಲಿ ಒಂಬತ್ತು ಗಣ್ಯರಿಗೆ ಪ್ರತಿಷ್ಠಿತ 'ನಾರದ ಪುರಸ್ಕಾರ'

kalpa News by kalpa News
August 6, 2026
in ಸಾಗರ
0
narada-ideals-should-inspire-journalism-arun-kumar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಸಮಾಜದಲ್ಲಿ ಸತ್ಯವನ್ನು ನಿರ್ಭೀತಿಯಿಂದ ಪ್ರತಿಪಾದಿಸಿ, ಆಡಳಿತಗಾರರಿಗೆ ಸೂಕ್ತ ಸಮಯದಲ್ಲಿ ಎಚ್ಚರಿಕೆ ನೀಡುವ ನಾರದರ ಆದರ್ಶಗಳು ಇಂದಿನ ಪತ್ರಿಕೋದ್ಯಮಕ್ಕೆ ದಾರಿದೀಪವಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮಗ್ರ ಕರ್ನಾಟಕ ಪ್ರಾಂತದ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ಹೇಳಿದರು.

ಗ್ರಾಮಭಾರತಿ ಟ್ರಸ್ಟ್, ಕಾರಣಗಿರಿ ಹಾಗೂ ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ನಡೆದ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
Kumadvathi College Shikariura“ನಾರದರನ್ನು ಕೇವಲ ಹಾಸ್ಯಪ್ರವೃತ್ತಿಯ ವ್ಯಕ್ತಿತ್ವವಾಗಿ ನೋಡುವುದು ತಪ್ಪು. ಅವರು ನಿರಂತರ ಸಂಚಾರದಲ್ಲಿದ್ದು ಸಮಾಜದ ಒಳಿತಿಗಾಗಿ ಸಂದೇಶ ಸಾರಿದ ಆದ್ಯ ಸಂವಹನಕಾರರು. ನಾರಾಯಣ ನಾಮಸ್ಮರಣೆಯೊಂದಿಗೆ ಸಮಾಜದಲ್ಲಿ ಸಾತ್ವಿಕತೆಯನ್ನು ಬೆಳೆಸಿದ ಅವರು, ರಾಜರಿಗೆ ಎಚ್ಚರಿಕೆ ನೀಡಿ ಸಮಸ್ಯೆಗಳ ಪರಿಹಾರಕ್ಕೂ ಮಾರ್ಗದರ್ಶನ ಮಾಡುತ್ತಿದ್ದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮವೂ ಇದೇ ಜವಾಬ್ದಾರಿಯನ್ನು ನಿಭಾಯಿಸಬೇಕು” ಎಂದು ಅರುಣ್ ಕುಮಾರ್ ಅಭಿಪ್ರಾಯಪಟ್ಟರು.

Also read>> ಕನಕಪುರ ಅರಣ್ಯದಲ್ಲಿ ಹೃದಯವಿದ್ರಾವಕ ಘಟನೆ | ಕಾಡಾನೆಯೊಂದಿಗೆ ಸೆಲ್ಫಿಗೆ ಯತ್ನ | ಉದ್ಯಮಿ ದುರ್ಮರಣ

ಅಧ್ಯಕ್ಷತೆ ವಹಿಸಿದ್ದ ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಹಾದಿಗಲ್ಲು ಲಕ್ಷ್ಮೀನಾರಾಯಣ ಮಾತನಾಡಿ, “ದೇಶಹಿತವೇ ಪತ್ರಿಕೋದ್ಯಮದ ಧ್ಯೇಯವಾಗಬೇಕು. ಸಂವೇದನಾಶೀಲತೆ, ಸಾಮಾಜಿಕ ಕಾಳಜಿ ಹಾಗೂ ವೃತ್ತಿನಿಷ್ಠೆಯನ್ನು ಪತ್ರಕರ್ತರು ಉಳಿಸಿಕೊಳ್ಳಬೇಕು. ತಾವು ಬೆಳೆದು ಬಂದ ಮೌಲ್ಯಗಳು ಮತ್ತು ಹಾದಿಯನ್ನು ಎಂದಿಗೂ ಮರೆಯಬಾರದು” ಎಂದು ಹೇಳಿದರು.

ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಹಾಗೂ ಕಾರಣಗಿರಿ ಕಲಾದರ್ಶನ ಸಂಪಾದಕ ಹನಿಯ ರವಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 15 ವರ್ಷಗಳಿಂದ ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯನ್ನು ಪ್ರಕಟಿಸುತ್ತಿದ್ದು, ಪತ್ರಕರ್ತರ ಜೊತೆಗೆ ಪತ್ರಿಕಾ ಏಜೆಂಟರ ಸೇವೆಯನ್ನೂ ಗುರುತಿಸಿ ನಾರದ ಪುರಸ್ಕಾರ ನೀಡುತ್ತಿರುವುದು ವಿಶೇಷ ಎಂದು ತಿಳಿಸಿದರು. ಪ್ರೀತಿ, ವಿಶ್ವಾಸ ಮತ್ತು ಆತ್ಮೀಯತೆಯೇ ಸಂಸ್ಥೆಯ ಕಾರ್ಯಚಟುವಟಿಕೆಗಳ ಮೂಲ ತತ್ವವಾಗಿದೆ ಎಂದರು.

ಕಳೆದ ನಾಲ್ಕು ದಶಕಗಳಿಂದ ಶ್ರೀ ಸಿದ್ಧಿವಿನಾಯಕ ಸನ್ನಿಧಿಯಲ್ಲಿ ಸಾವಿರಕ್ಕೂ ಹೆಚ್ಚು ಸಾಮೂಹಿಕ ಸತ್ಯನಾರಾಯಣ ಪೂಜೆಗಳು, ನೂರಾರು ಸಾಧು-ಸಂತರ ಆಗಮನ ಹಾಗೂ ಎರಡು ಸಾವಿರಕ್ಕೂ ಅಧಿಕ ಕಲಾವಿದರ ಕಲಾಪ್ರದರ್ಶನಗಳು ನಡೆದಿರುವುದು ಕಾರಣಗಿರಿಯ ಸಾಂಸ್ಕೃತಿಕ ಪರಂಪರೆಯ ವೈಶಿಷ್ಟ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ನ್ಯೂಸ್ ಅಂತರ್ಜಾಲ ಪತ್ರಿಕೆಯ ಸಂಪಾದಕ ರಘುಪತಿ ಯಾಜಿ, ಪರಿಸರ ಪತ್ರಕರ್ತ ರಘುನಂದನ್ ಭಟ್ ನರೂರ, ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ಸುಧೀಂದ್ರ, ಹಿರಿಯ ಪತ್ರಿಕಾ ಪ್ರತಿನಿಧಿ ಗಣಪತಿ ಪಂಡಿತ್, ಹೊಸದಿಗಂತ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ, ಟಿ.ವಿ. ವರದಿಗಾರ್ತಿ ಶೈಲಜಾ ಗೊರ್ನಮನೆ, ಹೊಸದಿಗಂತ ಶಿವಮೊಗ್ಗ ಸಂಪಾದಕ ವಾದಿರಾಜ್ ಕಮರೂರು, ಶ್ರೀಧರ ಸಂದೇಶ ಸಂಪಾದಕ ಗಜಾನನ ಭಟ್ಟ ರೇವಣಕಟ್ಟ ಹಾಗೂ ಅಂಕಣಕಾರ-ಲೇಖಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ಪ್ರತಿಷ್ಠಿತ ನಾರದ ಪುರಸ್ಕಾರ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಕಲಾಭಾರತಿ ಸದಸ್ಯರು ಪ್ರಾರ್ಥನೆ ಸಲ್ಲಿಸಿ, ರಾಷ್ಟ್ರೋತ್ಥಾನ ಬಳಗದ ಕಾರ್ಯದರ್ಶಿ ನಳಿನಚಂದ್ರ ಸ್ವಾಗತಿಸಿದರು. ವಸುಧಾ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕನಕಪುರ ಅರಣ್ಯದಲ್ಲಿ ಹೃದಯವಿದ್ರಾವಕ ಘಟನೆ | ಕಾಡಾನೆಯೊಂದಿಗೆ ಸೆಲ್ಫಿಗೆ ಯತ್ನ | ಉದ್ಯಮಿ ದುರ್ಮರಣ

Next Post

ರೋಗವಿಲ್ಲದ ಸ್ಥಿತಿ ಆರೋಗ್ಯವಲ್ಲ : ದೇಹ–ಮನಸ್ಸು–ಆತ್ಮದ ಸಮತೋಲನ : ರಾಮಚಂದ್ರಾಪುರ ಶ್ರೀ

kalpa News

kalpa News

Next Post
concern for your food like your vehicle's fuel: Ramachandrapura Shri

ರೋಗವಿಲ್ಲದ ಸ್ಥಿತಿ ಆರೋಗ್ಯವಲ್ಲ : ದೇಹ–ಮನಸ್ಸು–ಆತ್ಮದ ಸಮತೋಲನ : ರಾಮಚಂದ್ರಾಪುರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL