ಕಲ್ಪ ಮೀಡಿಯಾ ಹೌಸ್ | ನಾಸಿಕ್ |
ಮಹಾರಾಷ್ಟ್ರದ ನಾಸಿಕ್ ಬಳಿಯಲ್ಲಿ ನಿನ್ನೆ ರಾತ್ರಿ ಬಸ್’ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ 10 ಮಂದಿ ಸಜೀವ ದಹನಗೊಂಡಿದ್ದು, 24 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಔರAಗಾಬಾದ್ ರಸ್ತೆಯಲ್ಲಿ ನಸುಕಿನ 5 ಗಂಟೆ ಸುಮಾರಿಗೆ ಖಾಸಗಿ ಬಸ್ ಒಂದು ಕಂಟೈನರ್’ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್’ಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ. ಸಾವಿಗೀಡಾದ ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಬಸ್ ಪ್ರಯಾಣಿಕರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Also read: ಅಕ್ರಮ ಮಾಡಿಕೊಂಡಿರಲಿ ಎಂದು ಬಿಟ್ಟುಬಿಡಬೇಕಾ? ಡಿಕೆಶಿ ವಿರುದ್ಧ ಈಶ್ವರಪ್ಪ ಕಿಡಿ
ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್’ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post