No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೌರಕಾರ್ಮಿಕರ ಸೇವೆಗೆ ಸಮಾಜ ಸದಾ ಋಣಿಯಾಗಿರಬೇಕು: ಶಾಸಕ ಚನ್ನಬಸಪ್ಪ

ಯಾಂತ್ರೀಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗೆ ರಾಷ್ಟ್ರೀಯ ಕ್ರಿಯೆ (ನಮಸ್ತೆ)ದಿನಾಚರಣೆ ಕಾರ್ಯಕ್ರಮ

kalpa News by kalpa News
July 14, 2026
in ಶಿವಮೊಗ್ಗ
0
ಪೌರಕಾರ್ಮಿಕರ ಸೇವೆಗೆ ಸಮಾಜ ಸದಾ ಋಣಿಯಾಗಿರಬೇಕು: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಪೌರಕಾರ್ಮಿಕರು ನಗರದ ಸ್ವಚ್ಛತೆ ಮತ್ತು ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದು, ಅವರ ಸೇವೆಗೆ ಸಮಾಜ ಸದಾ ಋಣಿಯಾಗಿರಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಯಾಂತ್ರೀಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗೆ ರಾಷ್ಟ್ರೀಯ ಕ್ರಿಯೆ (ನಮಸ್ತೆ)ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರು ಯುಜಿಡಿ ಸಮಸ್ಯೆಗಳಿಂದ ಹಿಡಿದು ನಗರದ ನೈರ್ಮಲ್ಯ ನಿರ್ವಹಣೆವರೆಗೆ  ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಾವು ಬೆಳಗ್ಗೆ ಎದ್ದು ದೇವರನ್ನು ನೆನೆಯುತ್ತಾ ಇಲ್ಲವೋ ಗೊತ್ತಿಲ್ಲ, ಆದರೆ ಪೌರ ಕಾರ್ಮಿಕರು ಬೆಳಗಾಗುವುದರಲ್ಲಿ ಇಡೀ ನಗರವನ್ನು ಸ್ವಚ್ಚಗೊಳಿಸಿ,   ನಗರದ ನಾಗರೀಕರ ಆರೋಗ್ಯ ಕಾಪಾಡುವಲ್ಲಿ ಶ್ರಮಿಸುತ್ತಾರೆ ಎಂದರು.
ಪೌರ ಕಾರ್ಮಿಕರ ಕಲ್ಯಾಣ, ಸುರಕ್ಷತೆ ಹಾಗೂ ಕುಟುಂಬದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಯಾಂತಿಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗಾಗಿ ರೂಪಿಸಲಾದ ರಾಷ್ಟ್ರೀಯ ಯೋಜನೆ ಸ್ವಚ್ಛ ಭಾರತ ಅಭಿಯಾನದ ಭಾಗವಾಗಿದ್ದು, ಪೌರ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಜೀವನಮಟ್ಟ ಸುಧಾರಣೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಹಿಂದೆ ಮಲ ಹೊರುವ ಪದ್ಧತಿ ಅಸ್ತಿತ್ವದಲ್ಲಿದ್ದರೂ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಂತಹ ನಾಯಕರ ಪ್ರಯತ್ನದಿಂದ ಆ ಅಮಾನವೀಯ ಪದ್ಧತಿ ಅಂತ್ಯಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನದ ಮೂಲಕ ದೇಶದಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಿ ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸಿದ ಪರಿಣಾಮ ದೇಶದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ ಎಂದು ಹೇಳಿದರು.

ಚಿಂದಿ ಆಯುವವರ ಮಕ್ಕಳ ಶಿಕ್ಷಣಕ್ಕಾಗಿ ಶಿವಮೊಗ್ಗದಲ್ಲಿ ಆರಂಭವಾದ “ಮಾಧವ ನೆಲೆ” ಯೋಜನೆಯನ್ನು ಉದಾಹರಿಸಿದ ಅವರು, ಸಮಾಜಮುಖಿ ಸಂಘಟನೆಗಳ ಕಾರ್ಯದಿಂದ ಇಂದು ಆ ಮಕ್ಕಳು ಉನ್ನತ ಶಿಕ್ಷಣ ಪಡೆದು ಇಂಜಿನಿಯರ್, ವೈದ್ಯ ಹಾಗೂ ಐಎಎಸ್ ಅಧಿಕಾರಿಯಾಗುವ ಕನಸು ಕಾಣುತ್ತಿರುವುದು ಸಂತಸದ ಸಂಗತಿ ಎಂದರು.
JNNCE Shivamoggaಭಾರತದಲ್ಲಿ ನೈರ್ಮಲ್ಯ ಕೆಲಸದ ವೇಳೆ ಸಂಭವಿಸುವ ಸಾವುಗಳ ಸಂಖ್ಯೆಯನ್ನು ಶೂನ್ಯಕ್ಕೆ ತರುವುದು ಎಲ್ಲಾ ನೈರ್ಮಲ್ಯ ಕೆಲಸಗಳನ್ನು ಕಡ್ಡಾಯವಾಗಿ ತರಬೇತಿ ಪಡೆದ ಔಪಚಾರಿಕ ಕುಶಲ ಕಾರ್ಮಿಕರಿಂದಲೇ ಮಾಡಿಸುವುದು, ಮಾನವನ ಮಲದೊಂದಿಗೆ ನೇರಸಂಪರ್ಕಕ್ಕೆ ಬರದಂತೆ ತಡೆಯುವುದು, ಯಾಂತ್ರೀಕೃತ ನೈರ್ಮಲ್ಯ ಸೇವೆಗಳ ಸುರಕ್ಷಿತ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಎಸ್‍ಆರ್‍ಯುಗಳನ್ನು ಬಲಪಡಿಸುವುದು, ನೈರ್ಮಲ್ಯ ಉಪಕರಣಗಳ ಖರೀದಿಗೆ ಬಂಡವಾಳ ಸಬ್ಸಿಡಿ ನೀಡುವ ಮೂಲಕ ಜೀವನೋಪಾಯಕ್ಕೆ ಬೆಂಬಲ ನೀಡುವುದು, ನೈರ್ಮಲ್ಯ ಸಂಬಂಧಿತ ಯೋಜನೆಗಳಿಗೆ ಆರ್ಥಿಕ ನೆರವು ಮತ್ತು ಸಬ್ಸಿಡಿ ನೆರವನ್ನು ನೀಡುವುದು ಸೇರಿದಂತೆ ಅನೇಕ ಕಾರ್ಯಕ್ರಮಗಳು ಈ ನಮಸ್ತೆ ಯೋಜನೆಯಲ್ಲಿ ಅಡಗಿದೆ. ಯಾಂತ್ರಿಕ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

Also read: ಶಿವಮೊಗ್ಗ | ವಾರ್ಡ್ ಗಳಿಗೆ ಕಾಂಗ್ರೆಸ್ ಮುಖಂಡರ ಭೇಟಿ – SIR ಪ್ರಗತಿ ಪರಿಶೀಲನೆ

ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಮಾತನಾಡಿ, ನಮಸ್ತೆ ಕಾರ್ಯಕ್ರಮ ಎನ್ನುವುದು ಪೌರ ಕಾರ್ಮಿಕರಿಗೆ ಕೇವಲ. ಶಾಲು ಹಾಕಿ ನೆನೆಪಿನ ಕಾಣಿಕೆ ನೀಡಿ ಸನ್ಮಾನಕ್ಕೆ ಮಾತ್ರ ಸಿಮೀತ ಮಾಡುವುದಲ್ಲ, ಪೌರ ಕಾರ್ಮಿಕರು, ಚಿಂದಿ ಆಯುವವರು ಸೇರಿ ನಗರವನ್ನು ಸ್ವಚ್ಛಗೊಳಿಸುವವರ ಆರೋಗ್ಯ ಕಾಪಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಮಹಾನಗರ ಪಾಲಿಕೆಗಳ ನೌಕರರಸಂಘದ ಅಧ್ಯಕ್ಷ ಎನ್. ಗೋವಿಂದ ಅವರು ಪ್ರಸ್ತಾವಿಕವಾಗಿ ಮಾತನಾಡಿ, ನಮಸ್ತೆ  ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಸ್ಕ್ಯಾಂವೆಜರ್ಸ್ ಪುನರ್ವಸತಿಗಾಗಿ ಸ್ವಯಂ ಉದ್ಯೋಗ  ಯೋಜನೆಯಲ್ಲಿ ಅನೇಕಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರಲಾಗಿದೆ. ಒಟ್ಟಾರೆ ನೈರ್ಮಲ್ಯ ಕಾರ್ಮಿಕರ ಬದುಕು ಹಸನುಗೊಳಿಸಲು ಈ ಯೋಜನೆಯನ್ನು ರೂಪಿಸಲಾಗಿದ್ದು, ಅವರ ಆಭ್ಯುದಯಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ನೈರ್ಮಲ್ಯ ಕೆಲಸದಲ್ಲಿ ತೊಡಗಿದವರನ್ನು ಗುರುತಿಸಿ ಸನ್ಮಾನಿಸಲಾಯಿತು. ಹಾಗೆಯೇ ಹಲವರಿಗೆ ಆರೋಗ್ಯ ಸುರಕ್ಷತೆಯ ಕಿಟ್‍ಗಳನ್ನು ನೀಡಲಾಯಿತು.ಕಾರ್ಯ ಕ್ರಮದಲ್ಲಿ ಪಾಲಿಕೆ ಉಪ ಆಯುಕ್ತರಾದ(ಅಭಿವೃದ್ಧಿ) ತೇಜು ಪ್ರಸಾದ್,  ನಮಸ್ತೆ ನೋಡಲ್ ಅಧಿಕಾರಿಯೂ ಆದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪುಷ್ಪಾವತಿ, ಕಾರ್ಯ ಪಾಲಕ ಅಭಿಯಂತರರಾದ ಪ್ರಿಯಾ ಪಿ. ಇದ್ದರು.

ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ (ಪರಿಸರ) ಪ್ರಭಾಕರ್ ಅವರ ಎಲ್ಲರನ್ನು ಸ್ವಾಗತಿಸಿದರು. ಕಾರ್ಯ ಕ್ರಮದ ನಂತರ ರಂಗ ಕಲಾವಿದ ಅಪರಂಜಿ ಶಿವರಾಜು ಅವರು ಸ್ಬಚ್ವತ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ನೌಕರರ ಖಾಯಂ ಮಾಡಲು ಕ್ರಮ

ಪೌರ ಕಾರ್ಮಿಕರ ಹಿತ ರಕ್ಷಣೆಗೆ ಮಹಾನಗರ ಪಾಲಿಕೆ ಎಲ್ಲಾ ರೀತಿಯಲ್ಲೂ ಬದ್ದವಾಗಿದೆ. ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ರೀತಿಯಪರಿಕರಗಳನ್ನು ಕೂಡ ಒದಗಿಸಲಾಗಿದೆ. ಅವರ ಆರೋಗ್ಯದ ಸಲುವಾಗಿ ಆಯುಷ್ಮಾನ್ ಕಾರ್ಡ್ ಮಾಡುವಂತದ್ದು, ಆದುನಿಕ ಪರಿಕರಗಳನ್ನು ಕೊಟ್ಟು, ಅದಕ್ಕೆ ತಕ್ಕಂತೆ ಟ್ರೈನಿಂಗ್ ಕೊಡೋದು,  ಆರೋಗ್ಯ ತಪಾಸಣೆ ಮಾಡುವುದು, ಇದರ ಜತೆಗೆ ಬಹಳ ಮುಖ್ಯವಾಗಿ, ನೌಕರರನ್ನು ಪರ್ಮನೆಂಟ್ ಮಾಡುವಂತಹ ಕೆಲಸವನ್ನು ಕೂಡ ನಮ್ಮ ಪಾಲಿಕೆಯ ವತಿಯಿಂದ ಸರ್ಕಾರದ ಗಮನಕ್ಕೆ ತಂದಿದೆ. ಈಗಾಗಲೇ ಅದಕ್ಕೂ ಕೂಡ ಒಂದು ಆದೇಶವನ್ನು ಕೂಡ ಹೊರಡಿಸಿದೆ, ಈಗ ಒಳಚರಂಡಿ ಸಿಬ್ಬಂದಿ ಜತೆಗೆ ಸ್ಮಶಾನದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳನ್ನು ಕಾಯಂಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Civic WorkersKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNational Action (Namaste) Day ProgramNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಣ್ಣೆತ್ತಿನ ಅಮಾವಾಸ್ಯೆ | ಗೋಮಾತೆಗೆ ಸಂಸದ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಕೆ

Next Post

ರಾಮಚಂದ್ರ ಗೌಡರ ನಿಧನಕ್ಕೆ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ತೀವ್ರ ಸಂತಾಪ

kalpa News

kalpa News

Next Post
ರಾಮಚಂದ್ರ ಗೌಡರ ನಿಧನಕ್ಕೆ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ತೀವ್ರ ಸಂತಾಪ

ರಾಮಚಂದ್ರ ಗೌಡರ ನಿಧನಕ್ಕೆ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ತೀವ್ರ ಸಂತಾಪ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL