ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ಇದೇ ಮೊದಲ ಬಾರಿಗೆ ಗುರುವಾರ ಸೂರ್ಯಾಸ್ತದ ನಂತರ ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಈ ಮೂಲಕ ಹೊಸ ಇತಿಹಾಸವೊಂದನ್ನು ನಿರ್ಮಿಸಲಿದ್ದಾರೆ.
Also Read: ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ ಟಿ.ಬಿ. ಜಯಚಂದ್ರ
ಹೌದು… ಗುರು ತೇಜ್ ಬಹದ್ದೂರ್ ಅವರ 400ನೆಯ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ 9.30ಕ್ಕೆ ಕೆಂಪು ಕೋಟೆಯ ಲಾಕ್ಸ್’ನಿಂದ ಪ್ರಧಾನಿಯವರು ಮಾತನಾಡಲಿದ್ದಾರೆ.
Also Read: ಕಾಂಗ್ರೆಸ್ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕೈ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಈ ಕುರಿತಂತೆ ಮಾತನಾಡಿರುವ ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳು, 1675ರಲ್ಲಿ ಸಿಖ್ ಸಮುದಾಯದ 9ನೆಯ ಗುರು ತೇಜ್ ಬಹದ್ದೂರ್ ಕೊಲ್ಲಲು ಮೊಘಲ್ ದೊರೆ ಔರಂಗಜೇಬ್ ಆದೇಶ ನೀಡಿದ್ದ ಕಾರಣದಿಂದ ಕೆಂಪುಕೋಟೆಯನ್ನು ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಗುರುವಾರ ರಾತ್ರಿ 9.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಸಮುದಾಯಗಳ ನಡುವೆ ಸೌಹಾರ್ದತೆ ಮತ್ತು ಶಾಂತಿ ಮೂಡಿಸುವ ಬಗ್ಗೆ ಭಾಷಣವಿರಲಿದೆ ಎಂದಿದ್ದಾರೆ.
ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಈ ರೀತಿ ಕೆಂಪುಕೋಟೆಯಿಂದ ಭಾಷಣ ಮಾಡುತ್ತಿದ್ದಾರೆ. 2018ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಂದ ಅಜಾದ್ ಹಿಂದ್ ಸರ್ಕಾರ ರಚನೆಯ 75ನೆಯ ವರ್ಷಾಚರಣೆ ಅಂಗವಾಗಿ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜವನ್ನು ಮೋದಿ ಹಾರಿಸಿ, ರಾತ್ರಿ 9 ಗಂಟೆಯಲ್ಲಿ ಭಾಷಣ ಮಾಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post