ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್’ನ ಇಬ್ಬರು ನ್ಯಾಯಾಧೀಶರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಾಂವಿಧಾನಿಕ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗುತ್ತಿದೆ.
ಹಿಜಾಬ್ ವಿವಾದ ಕುರಿತಾಗಿ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ಆದರೆ, ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಹಾಗೂ ಸದಾಂಶು ದುಲಿಯಾ ಅವರಿದ್ದ ದ್ವಿಸದಸ್ಯ ಪೀಠ ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮೂರು ನ್ಯಾಯಾಧೀಶರಿರುವ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗುತ್ತಿದೆ.

ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಸಾಲಿಸಿಟರಿ ಜನರಲ್ ತುಷಾರ್ ಮೆಹ್ತಾ, ನಟರಾಜ್ ಸೇರಿದಂತೆ ಒಟ್ಟು ಆರು ವಕೀಲರು ವಾದಿಸಿದ್ದರು.
ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಗುರುತು ಸೂಚಿಸುವ ಬಟ್ಟೆಗಳನ್ನು ಧರಿಸಿಕೊಂಡು ವಿದ್ಯಾರ್ಥಿಗಳು ಹೋಗಬಾರದು ಎಂಬ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಉಡುಪಿಯ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ರಾಜ್ಯ ಸರ್ಕಾರದ ಪರವಾಗಿ ತೀರ್ಪು ನೀಡಿ, ನಿಯಮವನ್ನು ಎತ್ತಿ ಹಿಡಿದಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post