ಕಲ್ಪ ಮೀಡಿಯಾ ಹೌಸ್ | ಮುಂಬೈ |
ದೇಶದ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ(69) ನಿನ್ನೆ ರಾತ್ರಿ ಮುಂಜಾನೆ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಲಹರಿ ಅವರು ಒಂದು ತಿಂಗಳಿನಿಂದ ಆಸ್ಪತ್ರೆಗೆ ದಾಖಲಾಗಿ, ಚೇತರಿಸಿಕೊಂಡು ಸೋಮವಾರ ಡಿಸ್ಚಾರ್ಜ್ ಆಗಿದ್ದರು. ಆದರೆ ಮಂಗಳವಾರ ಅವರ ಆರೋಗ್ಯ ಹದಗೆಟ್ಟಿತು. ಹೀಗಾಗಿ, ವೈದ್ಯರನ್ನು ಮನೆಗೇ ಕರೆತಂದು ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತು. ಆದರೆ, ಅಬ್ಸ್ಟ್ರಕ್ಟಿವ್ ಸ್ಲೀಪ್ ಅಪ್ನಿಯ ಕಾರಣದಿಂದ ಲಹಿರಿ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post