ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಲೇಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೇಂದ್ರವು ‘ಅಗ್ನಿಪಥ’ ಯೋಜನೆಯ ಮೂಲಕ ಸೇನೆಯನ್ನು “ದುರ್ಬಲಗೊಳಿಸುತ್ತಿದೆ. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಂಡಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ನೇಮಕಾತಿ ಉಪಕ್ರಮವನ್ನು ಹಿಂತೆಗೆದುಕೊಳ್ಳಲೇಬೇಕು ಎಂದು ಆಗ್ರಹಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ತನ್ನ ವಿಚಾರಣೆಯ ಸಮಯದಲ್ಲಿ ಪಕ್ಷದ ಸದಸ್ಯರಿಗೆ ನೀಡಿದ ಸಹಾಯಕ್ಕಾಗಿ ಮಾಜಿ ಕಾಂಗ್ರೆಸ್ ಮುಖ್ಯಸ್ಥರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ತಾನು ಒಬ್ಬಂಟಿಯಾಗಿರಲಿಲ್ಲ ಬದಲಾಗಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತಿರುವ ಪ್ರತಿಯೊಬ್ಬರ ಬೆಂಬಲವಿದೆ ಎಂದು ಅವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post