ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಯನ್ನು ಯುಜಿಸಿ ನಿಯಮ ಪ್ರಕಾರ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಈ ಮೂಲಕ ಯುಜಿಸಿಯ ಜುಲೈ 6ರ ಸುತ್ತೋಲೆಯನ್ನು ಎತ್ತಿಹಿಡಿದಿದೆ.
ಈ ಕುರಿತಂತೆ ಇಂದು ತೀರ್ಪು ನೀಡಿರುವ ನ್ಯಾಯಾಲಯ, ರಾಜ್ಯಗಳು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಹೆಚ್ಚು ಕಾಫಿ ಕುಡಿದರೆ ಗ್ಯಾಸ್ಟ್ರಿಕ್ ಗ್ಯಾರೆಂಟಿ | ಜೀವನಶೈಲಿ ಹೀಗಿರಲಿ | Gastric | Tips For Healthy Life ಆರೋಗ್ಯ ಸಲಹೆ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವರನ್ನು ತೇರ್ಗಡೆ ಮಾಡಲು ರಾಜ್ಯ ಸರ್ಕಾರಗಳ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು. ಕೋವಿಡ್19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯಗಳು ಪರೀಕ್ಷೆಗಳನ್ನು ಮುಂದೂಡಬಹುದು ಮತ್ತು ಯುಜಿಸಿಯನ್ನು ಸಮಾಲೋಚಿಸಿ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಬಹುದು ಎಂದು ನ್ಯಾಯಾಲಯ ಹೇಳಿದೆ.
Get In Touch With Us info@kalpa.news Whatsapp: 9481252093















