ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೂರತ್: ಗುಜರಾತ್’ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದ ಟ್ರಕ್ ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದ್ದು. ಘಟನೆಯಲ್ಲಿ 15 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ದುರ್ಘಟನೆ ಸಂಭವಿಸುವ ವೇಳೆ ಪಾದಚಾರಿ ಮಾರ್ಗಗಳಲ್ಲಿ ಕಾರ್ಮಿಕರು ಮಲಗಿದ್ದರೆಂದು ಹೇಳಲಾಗುತ್ತಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲರೂ ಕಾರ್ಮಿಕರಾಗಿದ್ದು, ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೂರತ್ ಟ್ರಕ್ ಅಪಘಾತದಲ್ಲಿ ಹಲವು ಜನರು ಸಾವನ್ನಪ್ಪಿರುವುದು ದುರಂತ. ಮೃತರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post