ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶ್ರೀನಗರ: ಕಣಿವೆ ರಾಜ್ಯದ ನಾಗ್ರೋಟಾದ ಬಳಿಯಲ್ಲಿ ಇಂದು ಮುಂಜಾನೆ ಭಾರತೀಯ ಸೇನಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ.

ಬಾನ್ ಟೋಲ್ ಪ್ಲಾಜಾ ಬಳಿಯಲ್ಲಿ ಉಗ್ರರು ಅಡಗಿರುವ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಟೋಲ್ ಪ್ಲಾಜಾ ಬಳಿ ಭದ್ರತಾ ಪಡೆಗಳು ನಾಕಾ ಬಂದಿ ಹಾಕಿ, ವಾಹನಗಳ ತಪಾಸಣೆ ನಡೆಸುವಾಗ ಉಗ್ರರ ಗುಂಪೊಂದು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿ, ಅರಣ್ಯದತ್ತ ಓಡಿದ್ದಾರೆ. ತಕ್ಷಣವೇ ಬೆಳಗ್ಗೆ 5 ಗಂಟೆ ಸಮಯದಲ್ಲಿ ಎನ್ ಕೌಂಟರ್ ಆರಂಭಿಸಲಾಗಿದೆ.
ಗುಂಡಿನ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಯಲ್ಲಿದ್ದ ಪೊಲೀಸ್ ಕಾನ್ಸ್’ಟೇಬಲ್ ಒಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















