ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜೆಎನ್’ಯು ಕ್ಯಾಂಪಸ್’ನಲ್ಲಿ ಭಾನುವಾರ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಇಂದು ಎಫ್’ಐಆರ್ ದಾಖಲಿಸಿಕೊಂಡಿದ್ದಾರೆ.
ಈ ಕುರಿತಂತೆ ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದ್ದು, ಜೆಎನ್’ಯು ಕ್ಯಾಂಪಸ್’ನಲ್ಲಿ ಮಾಂಸಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಹಾಗೂ ಎಬಿವಿಪಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿತ್ತು. ಇದು ಘರ್ಷಣೆಗೆ ತಿರುಗಿ ಹೊಡೆದಾಟ ನಡೆದಿತ್ತು.
ಘಟನೆಯಲ್ಲಿ ಎರಡೂ ಕಡೆಯ ಹಲವು ವಿದ್ಯಾರ್ಥಿಗಳ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 341 (ತಪ್ಪು ಸಂಯಮ), 509 (ಮಹಿಳೆಯರ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ) ಮತ್ತು 34ರ ಅಡಿಯಲ್ಲಿ ಎಫ್’ಐಆರ್ ದಾಖಲಿಸಿಕೊಂಡಿದ್ದಾರೆ.
ಈ ನಡುವೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ಗೆ ಸೇರಿದ ವಿದ್ಯಾರ್ಥಿಗಳು ಕೂಡ ಲಿಖಿತ ದೂರು ನೀಡುವುದಾಗಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post