ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೇರಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊಲ್ಲಮ್ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸಮುದ್ರಕ್ಕೆ ಜಿಗಿದು ಈಜಾಡಿದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೇರಳ ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ನಿನ್ನೆ ಕೊಲ್ಲಂ ಜಿಲ್ಲೆಗೆ ಕಾಂಗ್ರೆಸ್ ನಾಯಕರೊಂದಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅಲ್ಲಿ ತಂಗಸ್ಸೆರಿ ಸಮುದ್ರದಲ್ಲಿ ತಮ್ಮ ಕೆಲವು ಸ್ನೇಹಿತರು ಹಾಗೂ ಮೀನುಗಾರರೊಂದಿಗೆ ಸುಮಾರು 10 ನಿಮಿಷಗಳ ಕಾಲ ಈಜಾಡಿದ್ದಾರೆ.
ಸಮುದ್ರ ತೀರಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರು ಕೆಲವು ಮೀನುಗಾರರು ಮೀನು ಹಿಡಿಯಲು ಬಲೆ ಬೀಸಿ ಸಮುದ್ರಕ್ಕೆ ಜಿಗಿದರು. ಅವರೊಟ್ಟಿಗೆ ರಾಹುಲ್ ಗಾಂಧಿ ಸಹ ದೋಣಿಯಿಂದ ನೀರಿಗೆ ಜಿಗಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post