ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೇಂದ್ರ ಸರ್ಕಾರ ಅನ್ ಲಾಕ್ 4.0 ಮಾರ್ಗಸೂಚಿ ಘೋಷಣೆ ಮಾಡಿದ್ದು, ಇದರಂತೆ ನವೆಂಬರ್ 1ರಿಂದ ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳ ಆರಂಭಕ್ಕೆ ಹಸಿರು ನಿಶಾನೆ ತೋರಿಸಿದೆ.
2020-21ರ ಶೈಕ್ಷಣಿಕ ಅಧಿವೇಶನಕ್ಕೆ ಪ್ರಥಮ ವರ್ಷದ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿ ಪರಿಷ್ಕೃತ ಯುಜಿಸಿ ಮಾರ್ಗಸೂಚಿಗಳನ್ನು ಕೇಂದ್ರ ಶಿಕ್ಷಣ ಸಚಿವಾಲಯ ಇಂದು ಅಂಗೀಕರಿಸಿದೆ.
In view of the COVID-19 pandemic, the Commission has accepted the Report of the Committee and approved the @ugc_india Guidelines on Academic Calendar for the First Year of Under-Graduate and Post-Graduate Students of the Universities for the Session 2020-21.
Suggested calendar👇 pic.twitter.com/JPYNhiWb0k
— Dr. Ramesh Pokhriyal Nishank (@DrRPNishank) September 22, 2020
ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಶಿಕ್ಷಣ ಸಚಿವ ರಮೇಶ್, ಯುಜಿಸಿ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, 2020-21ರ ಅಧಿವೇಶನಕ್ಕಾಗಿ ವಿಶ್ವವಿದ್ಯಾಲಯಗಳ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ಶೈಕ್ಷಣಿಕ ಕ್ಯಾಲೆಂಡರ್ ಕುರಿತ ಯುಜಿಸಿ ಮಾರ್ಗಸೂಚಿಗಳನ್ನು ಅಂಗೀಕರಿಸಿದೆ ಎಂದಿದ್ದಾರೆ.
ಮೊದಲ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ನವೆಂಬರ್‌ನಿಂದ ಪ್ರಾರಂಭವಾಗಲಿದ್ದು, ಪ್ರವೇಶ ಪ್ರಕ್ರಿಯೆಯು ಅಕ್ಟೋಬರ್ 30 ರವರೆಗೆ ಮುಂದುವರಿಯುತ್ತದೆ.
ವಾರ ಭವಿಷ್ಯ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 20.09.2020 ರಿಂದ 26.09.2020
ಕಳೆದುಹೋದ ಕಲಿಕೆಯ ಸಮಯವನ್ನು ಸರಿದೂಗಿಸಲು ವಾರದಲ್ಲಿ ಆರು ದಿನ ತರಗತಿಗಳನ್ನು ನಡೆಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ವಿರಾಮ ಮತ್ತು ರಜಾದಿನಗಳನ್ನು ಮೊಟಕುಗೊಳಿಸುವಂತೆ ಸಚಿವಾಲಯ ಸಂಸ್ಥೆಗಳಿಗೆ ಸೂಚಿಸಿದೆ.
Get In Touch With Us info@kalpa.news Whatsapp: 9481252093
Discussion about this post