ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಲಕ್ನೋ: ಇಡಿಯ ದೇಶವೇ ದೀಪಾವಳಿಯ ಸಂಭ್ರಮದಲ್ಲಿದ್ದರೆ, ಉತ್ತರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿ, ಮೃತದೇಹದಿಂದ ಶ್ವಾಸಕೋಶವನ್ನೇ ಹೊತ್ತೊಯ್ದು ಕ್ರೌರ್ಯ ಮೆರೆದಿದ್ದಾರೆ.
ಉತ್ತರ ಪ್ರದೇಶದ ಘಟಾಂಪುರದಿಂದ ದೀಪಾವಳಿ ದಿನದಂದು ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.
ಬಾಲಕಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವುದು ತಿಳಿದುಬಂದಿದ್ದು, ಬಾಲಕಿಯ ದೇಹದಲ್ಲಿ ಶ್ವಾಸಕೋಶ ನಾಪತ್ತೆಯಾಗಿರುವ ವಿಚಾರ ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಪೊಲೀಸರು ಅಂಕುಲ್ ಕುರಿಲ್ ಮತ್ತು ಬೀರನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣ ಪ್ರಮುಖ ರುವಾರಿ ಪರಶುರಾಮ್ ಎಂದು ಹೇಳಲಾಗಿದ್ದು, ಈತ 1999ರಲ್ಲಿಯೇ ವಿವಾಹವಾಗಿದ್ದರೂ ಮಕ್ಕಳಿರಲಿಲ್ಲ. ಹೀಗಾಗಿ ಮಾಟ ಮಂತ್ರ ಮಾಡುವವರ ಬಳಿ ಹೋಗಿದ್ದಾನೆ. ಈ ವೇಳೆ ಅವರು ಬಾಲಕಿಯೊಬ್ಬಳ ಶ್ವಾಸಕೋಶ ಬೇಕೆಂದು ಹೇಳಿದ್ದಾರೆ. ಇದನ್ನು ನಂಬಿದ ಪರಶುರಾಮ್ ತನ್ನ ಸಂಬಂಧಿಕರಾದ ಅಂಕುಲ್ ಹಾಗೂ ಬೀರನ್ ಬಳಿ ಬಾಲಕಿಯೊಬ್ಬಳ ಶ್ವಾಸಕೋಶವನ್ನು ತಂದು ಕೊಡುವಂತೆ ಹೇಳಿ ಹಣ ನೀಡುವುದಾಗಿ ತಿಳಿಸಿದ್ದಾನೆ. ಹೀಗಾಗಿ ಆರೋಪಿಗಳಿಬ್ಬರು ಬಾಲಕಿಯನ್ನು ಅಪಹರಣ ಮಾಡಿ ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಹತ್ಯೆ ಮಾಡುವುದಕ್ಕೂ ಮುನ್ನ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಶ್ವಾಸಕೋಶವನ್ನು ತೆಗೆದಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post