No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.20ರಿಂದ ಮೂರು ದಿನ ಶಿವಮೊಗ್ಗದಲ್ಲಿ ಕಲಾರಸಿಕರಿಗೆ ರಸದೌತಣ

ಸಹಚೇತನ ನಾಟ್ಯಾಲಯ ಆಯೋಜನೆಯಲ್ಲಿ ನಾಟ್ಯಾರಾಧನಾ-10: ರಾಷ್ಟ್ರೀಯ ನೃತ್ಯ ಮಹೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2019
in ಶಿವಮೊಗ್ಗ
0
ಸೆ.20ರಿಂದ ಮೂರು ದಿನ ಶಿವಮೊಗ್ಗದಲ್ಲಿ ಕಲಾರಸಿಕರಿಗೆ ರಸದೌತಣ
Share on FacebookShare on TwitterShare on WhatsApp

ಶಿವಮೊಗ್ಗ: ಮಲೆನಾಡಿನ ಪ್ರತಿಷ್ಠಿತ ಸಹಚೇತನ ನಾಟ್ಯಾಲಯದ ವತಿಯಿಂದ ನಾಟ್ಯಾರಾಧನಾ-10 ಎಂಬ ವಿಶೇಷ ನೃತ್ಯ ವೈಭವವನ್ನು ಸೆ.20, 21 ಹಾಗೂ 22ರಂದು ಆಯೋಜಿಸಲಾಗಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಹಚೇತನ ನಾಟ್ಯಾಲಯದ ನೃತ್ಯಗುರು ಸಹನಾ ಚೇತನ್, ನೃತ್ಯದ ಪರಿಭಾಷೆ ಮಾನವನ ಆತ್ಮ ವಿಕಾಸದ ಬುನಾದಿ. ಸಂಸ್ಕೃತಿ ಸಂಸ್ಕಾರಗಳ ಜೊತೆಜೊತೆಗೆ ನಮ್ಮ ದೇಶದ ಇತಿಹಾಸ ಹಾಗೂ ಕಲಾಸಿರಿವಂತಿಕೆಯನ್ನು ಈ ಕಾಲಘಟ್ಟದಲ್ಲೂ ನಾವು ನೋಡುತ್ತಿದ್ದೇವೆಂದರೆ ಅದು ನಮ್ಮ ಹಿರಿಯರು ನಮಗೆ ನೀಡಿದ ಬಳುವಳಿ. ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇಶದ ಮೂಲೆಮೂಲೆಗಳಿಂದ ಕಂಡುಕೇಳರಿಯದ ನೃತ್ಯ ಪ್ರಕಾರಗಳನ್ನು ಕರೆಯಿಸಿ ಶಿವಮೊಗ್ಗೆಯ ರಸಿಕರಿಗೆ ಕಲಾರಸಸ್ವಾದವನ್ನು ಕಳೆದ ಒಂಬತ್ತು ವರ್ಷಗಳಿಂದ ನೀಡುತ್ತಾ ಬಂದಿದ್ದು ಈ ನಿಟ್ಟಿನಲ್ಲಿ ಭಾರತೀಯ ಸಂಸ್ಕೃತಿಯ ಪ್ರಾಚೀನ ಪರಂಪರೆಯಾದ ನೃತ್ಯಕಲೆಗೆ ಸಹಚೇತನ ನಾಟ್ಯಾಲಯ ಈ ಕಾರ್ಯಕ್ರಮವನ್ನು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದೆ ಎಂದರು.

ಈ ಬಾರಿ ಸಹಚೇತನ ತನ್ನ ಹತ್ತನೆಯ ವರ್ಷದ ನಾಟ್ಯಾರಾಧನೆಯನ್ನು ಆಚರಿಸುತ್ತಿದೆ. ಸೆ. 20ರಂದು ಪ್ರಣವಾಕಾರಂ ಪ್ರಣಮಾಮ್ ಎಂಬ ಶೀರ್ಷಿಕೆಯ ಅಡಿಯಲ್ಲಿ ಶಾಸ್ತ್ರೀಯ ಮಾರ್ಗ ಆಧಾರಿತ ಶ್ರೀಗಣೇಶನ ವಿಶೇಷ ಕೃತಿಗಳನ್ನು ನೃತ್ಯಕ್ಕೆ ಅಳವಡಿಸಲಾಗಿದ್ದು, ನಾಟ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ವೇದಿಕೆಯಲ್ಲಿ ಪ್ರಸ್ತುತ ಪಡಿಸುತ್ತಾರೆ ಎಂದರು.

ಸೆಪ್ಟೆಂಬರ್ 21 ರಂದು ನೃತ್ಯಗುರು ಸಹನಾ ಚೇತನ್ ತಮ್ಮ ಏಕವ್ಯಕ್ತಿ ನೃತ್ಯ ರೂಪಕದಲ್ಲಿ ಕೃಷ್ಣನ ಒಂದು ವಿಶಿಷ್ಟ ಕೀರ್ತನೆಯನ್ನು ಆರಿಸಿಕೊಂಡು ಆ ಕೀರ್ತನೆಯಲ್ಲಿ ಶ್ರೀಕೃಷ್ಣನ ಬಗೆಗಿನ ವಿವಿಧ ಜನರ ಒಂಬತ್ತು ವಿಭಿನ್ನ ಆಲೋಚನೆಗಳು ಮತ್ತು ಭಾವನೆಗಳನ್ನು ನವರಸ ವಿಲಾಸ ಎಂಬ ಶೀರ್ಷಿಕೆಯಡಿ ಪ್ರದರ್ಶಿಸಲಾಗುತ್ತದೆ. ನಂತರ ಭರತನಾಟ್ಯದ ವಿವಿಧ ಆಯಾಮಗಳನ್ನು ಪ್ರತಿಬಿಂಭಿಸುವ ಸಾಧಾರಣ ಮಾರ್ಗದಿಂದ ಮೊದಲುಗೊಂಡು ಬೇರೆ ಬೇರೆ ಶೈಲಿಗಳಲ್ಲಿ ಹಾಗೂ ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವ ವಿಶೇಷ ಮಾರ್ಗನೃತ್ಯ ಭಾಗಗಳನ್ನು ಪ್ರಸ್ತುತ ಪಡಿಸುತ್ತಾ ಶ್ರೀರಾಮ ಕೀರ್ತನೆಗಳನ್ನೂ ಶ್ರೀರಾಮ ನಾಟ್ಯಂನಲ್ಲಿ ಪ್ರದರ್ಶಿಸಲಾಗುವುದು ಎಂದರು.

ಸೆ.22ರಂದು ವಿಶೇಷವಾಗಿ ಮಲೆನಾಡಿಗರ ಪಾಲಿಗೆ ರೋಚಕ ಅನುಭವವನ್ನು ಕೊಡುವ ಕೇರಳದ ಕ್ಷೇತ್ರ ಡಾನ್ಸ್‌ ಕಂಪನಿಯವರಿಂದ ಕೂಚುಪುಡಿ ಹಾಗೂ ಭರತನಾಟ್ಯ ನೃತ್ಯಗಳ ವಿಶಿಷ್ಟ ಸಮ್ಮಿಲನವನ್ನು ಪ್ರದರ್ಶಿಸಲಾಗುತ್ತದೆ. ಈ ಎರಡೂ ನೃತ್ಯ ಶೈಲಿಗಳನ್ನು ಕರಗತಗೊಳಿಸಿಕೊಂಡಿರುವ ತಂಡದ ಮುಖ್ಯ ನೃತ್ಯಗಾರರಾದ ಸರುಣ್ ರವೀಂದ್ರನ್ ಇವರು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ನೃತ್ಯ ಸಂಯೋಜನೆಗಳನ್ನು ಮಾಡಿ ತಂಡ ಕಟ್ಟಿ ವಿಶ್ವದಾದ್ಯಂತ ಪ್ರದರ್ಶನಗಳನ್ನು ಈಗಾಗಲೇ ನೀಡುತ್ತಾ ಬಂದಿದ್ದಾರೆ. ಜೊತೆಗೆ ಗಾಜಿಯಾಬಾದ್’ನ ಫುಟ್ ವರ್ಕ್ಸ್‌ ಡಾನ್ಸ್‌ ಕಂಪನಿ ತಂಡದವರು ಪ್ಲಾಸ್ಟಿಕ್ ನಿರ್ಮೂಲನೆ ಹಾಗೂ ಅದರಿಂದಾಗುವ ಭಯಾನಕ ದುರಂತಗಳ ಪ್ರತ್ಯಕ್ಷ ನಿರೂಪಣೆಯನ್ನು ಕಟ್ಟಿಕೊಡುವ ಹೊಸ ರೀತಿಯ ಪ್ರಯತ್ನವನ್ನು ಸಮಕಾಲೀನ ನೃತ್ಯದಲ್ಲಿ (ಕಂಟೆಂಪರರಿ) ಪ್ರಸ್ತುತಪಡಿಸಲಿದ್ದಾರೆ ಎಂದರು.

ಈ ಮೂರೂ ದಿನಗಳ ಕಾರ್ಯಕ್ರಮಕ್ಕೆ ವಾಸು, ವಿಕ್ರಂ ಆರ್ಟ್ಸ್‌’ರವರ ರಂಗ ಸಜ್ಜಿಕೆ, ಹರಿಗೆ ಗೋಪಾಲಸ್ವಾಮಿಯವರ ಬೆಳಕಿನ ವಿನ್ಯಾಸ, ಪುರುಷೋತ್ತಮ ತಲವಾಟ ಮತ್ತು ವೃಂದದವರ ಪ್ರಸಾಧನವಿದ್ದು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರವಿದೆ ಎಂದರು.

ಕಾರ್ಯಕ್ರಮಕ್ಕೆ ಉದ್ಘಾಟನಾ ದಿನದಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಪಾಲಿಕೆ ಸದಸ್ಯ ಪ್ರಭಾಕರ ಪಿ.(ಪ್ರಭು) ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪದಂದು ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅತಿಥಿ, ಕಲಾವಿದರನ್ನು ಸನ್ಮಾನಿಸಲಿದ್ದಾರೆ ಎಂದರು.

ಈ ಮೂರೂ ದಿನಗಳ ಸಾಂಸ್ಕೃತಿಕ ರಸದೌತಣಕ್ಕೆ ಉಚಿತ ಪ್ರವೇಶವಿದ್ದು ಕಲಾಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ಸಹಚೇತನ ಬಳಗಕ್ಕೆ ಹುರಿದುಂಬಿಸಿ ಕಲಾಭಿಮಾನಿಗಳೆಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಹಚೇತನ ಬಳಗದ ಗೌರವಾಧ್ಯಕ್ಷರಾದ ಎಸ್.ಎನ್. ಚನ್ನಬಸಪ್ಪ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ನಾಟ್ಯಾಲಯದ ಗೌರವಾಧ್ಯಕ್ಷರಾದ ಎಸ್.ಎನ್. ಚನ್ನಬಸಪ್ಪ, ಅಧ್ಯಕ್ಷ ಎನ್.ಆರ್. ಪ್ರಕಾಶ್, ಖಜಾಂಚಿ ಎಸ್. ಚೇತನ್, ನಿರ್ದೇಶಕರುಗಳಾದ ಆನಂದ್ ರಾಮ್, ಮಾಲತೇಶ್, ಹರೀಶ್ ಕಾರ್ಣಿಕ್, ಲಕ್ಷ್ಮೀನಾರಾಯಣ್, ಮಾಲತೇಶ್, ಪಾರ್ವತಿ, ಸಿಂಧುಶ್ರೀ ಉಪಸ್ಥಿತರಿದ್ದರು.

Tags: Malnad NewsNational Dance FestivalPlastic EradicationSahachetana NatyalayaShivamoggaನಾಟ್ಯಾರಾಧನಾ-10ನೃತ್ಯ ವೈಭವಪ್ಲಾಸ್ಟಿಕ್ ನಿರ್ಮೂಲನೆಶಿವಮೊಗ್ಗಸಹಚೇತನ ನಾಟ್ಯಾಲಯ
Share210Tweet123Send
Previous Post

ಶಿವಮೊಗ್ಗ: ಮನೋವೈದ್ಯೆ ಶುಭ್ರತಾಗೆ ಇಂಗ್ಲೆಂಡಿನ ಪ್ರತಿಷ್ಠಿತ ಪ್ರಶಸ್ತಿ

Next Post

ಬೆಂಗಳೂರಿನ ಯುಕೋ ಬ್ಯಾಂಕ್’ನಲ್ಲಿ ಭಾರೀ ಅಗ್ನಿ ಅವಘಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನ ಯುಕೋ ಬ್ಯಾಂಕ್’ನಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರಿನ ಯುಕೋ ಬ್ಯಾಂಕ್’ನಲ್ಲಿ ಭಾರೀ ಅಗ್ನಿ ಅವಘಡ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL