ಕಲ್ಪ ಮೀಡಿಯಾ ಹೌಸ್ | ನಾಯಕನಹಟ್ಟಿ(ಚಳ್ಳಕೆರೆ) |
ಇಲ್ಲಿನ ಶ್ರೀಗುರು ತಿಪ್ಪೇರುದ್ರಸ್ವಾಮಿ ದೊಡ್ಡಕೆರೆಯಲ್ಲಿ ಆಯೋಜಿಸಲಾಗಿದ್ದ ತೆಪ್ಪೋತ್ಸವ ಅದ್ದೂರಿಯಾಗಿ ನೆರವೇರಿತು.
ತೆಪ್ಪೋತ್ಸವದ ಹಿನ್ನೆಲೆಯಲ್ಲಿ ತಿಪ್ಪೇರುದ್ರಸ್ವಾಮಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿತ್ತು. ಇಲ್ಲಿನ ಕೆರೆಯಲ್ಲಿ ಅಲಂಕೃತ ತೆಪ್ಪದಲ್ಲಿ ಶ್ರೀಸ್ವಾಮಿಯವರ ಅದ್ದೂರಿ ತೆಪ್ಪೋತ್ಸವ ಜಗುರಿತು. ಈ ವಿಶೇಷ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಜಿಲ್ಲೆಯ ವಿವಿಧ ಕಡೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಈ ಸಂದಭದಲ್ಲಿ ಯಾವುದೇ ರೀತಿಯ ಗೊಂದಲ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಬಂದೋಬಸ್ತ್ ಮಾಡಿದ್ದರು. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಮೋಟಾರ್ ಬೋಟ್, ಲೈಫ್ ಜಾಕೇಟ್ ವ್ಯವಸ್ಥೆ ಮಾಡಿದ್ದು, ತೆಪ್ಪೋತ್ಸವ ನಡೆಯುವ ವೇಳೆ ಕೆರೆಯಲ್ಲಿ ಭದ್ರತಾ ಸಿಬ್ಬಂದಿಗಳು ಬೋಟ್’ನಲ್ಲಿ ಕ್ರಮ ವಹಿಸಿದ್ದರು.
Also read: ಮೈಸೂರಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿ: ಕಂಡಲ್ಲಿ ಗುಂಡಿಕ್ಕಲು ಆದೇಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post