ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ ಅಥವಾ ಎನ್‌ಸಿಸಿ ಎನ್ನುವುದು ಭಾರತದಲ್ಲಿ ಅತಿದೊಡ್ಡ ಯುವಕರ ಸಂಘಟನೆಯಾಗಿದೆ. ಇದು ಭಾರತೀಯ ಸಶಸ್ತ್ರ ಪಡೆಗಳ ಯುವ ವಿಭಾಗವಾಗಿದ್ದು, ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ಆಧಾರದ ಮೇಲೆ ಸೇನಾ ತರಬೇತಿ ನೀಡುವ ವ್ಯವಸ್ಥೆ ಎಂದು ಪ್ರಾಚಾರ್ಯರಾದ ಡಾ ರವೀಂದ್ರ ಕೆಸಿ ಹೇಳಿದರು.
ಶಿಕಾರಿಪುರ ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಎನ್‌ಸಿಸಿ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಎನ್‌ಸಿಸಿಯಿಂದ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ. ಈ ಪ್ರಮಾಣ ಪತ್ರಗಳು ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದಲ್ಲಿ ಮೀಸಲಾತಿ ಪಡೆಯಲು ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಸಹಾಯಕವಾಗುತ್ತವೆ ಎಂದು ಕಿವಿಮಾತು ಹೇಳಿದರು.
Also read>> ಶಿವಮೊಗ್ಗ : ಬಿ.ನಾಗೇಂದ್ರ ಪದಚ್ಯುತಿಗೆ ಆಗ್ರಹ : ಆ.17ರಿಂದ ಬಿಜೆಪಿ ಅನಿರ್ದಿಷ್ಟಾವಧಿ ಧರಣಿ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹಾಯಕ ಪ್ರಾಧ್ಯಾಪಕರಾದ ಡಾ ಕೋಟೋಜಿರಾವ್ ಆರ್ ಮಾತನಾಡಿ, ಎನ್‌ಸಿಸಿ ತರಬೇತಿಯು ವಿದ್ಯಾರ್ಥಿಗಳಲ್ಲಿ ಶಿಸ್ತುಬದ್ಧ ಜೀವನವನ್ನು ಕಲಿಸುತ್ತದೆ. ಅವರುಗಳಲ್ಲಿ ಉತ್ತಮ ನಾಯಕತ್ವದ ಗುಣಗಳೊಂದಿಗೆ ದೇಶಭಕ್ತಿಯನ್ನು ಬೆಳೆಸಲು ಇದು ಸಹಾಯಕ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಎನ್‌ಸಿಸಿ ಕೇರ್ ಟೆಕ್ ಅಧಿಕಾರಿಯಾದ ಶರತ್ ಕುಮಾರ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಎನ್‌ಸಿಸಿ ಕುರಿತಂತೆ ನೇಮಕಾತಿ ಮಾನದಂಡಗಳಿಗೆ ಸಂಬಂಧಿಸಿದಂತೆ ಸೂಕ್ತ ಮಾರ್ಗದರ್ಶನ ಮಾಡಿದರು. ವಿಶೇಷ ಶಿಬಿರಗಳಲ್ಲಿ ಭಾಗವಹಿಸಿದ ಎನ್‌ಸಿಸಿ ವಿದ್ಯಾರ್ಥಿಗಳಿಗೆ ವಿವಿಧ ಪದಕ, ಪ್ರಮಾಣ ಪತ್ರಗಳು ಹಾಗೂ ರ‌್ಯಾಂಕ್ ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎನ್‌ಸಿಸಿ ಕೆಡೆಟುಗಳಾದ ರಮ್ಯಾ ಸ್ವಾಗತಿಸಿ, ಭೂಮಿಕಾ ನಿರೂಪಿಸಿ, ಮಾನ್ವಿತಾ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







