ನವದೆಹಲಿ: ಎನ್‌ಸಿಇಆರ್‌ಟಿ ಪಠ್ಯಪುಸ್ತಕದಲ್ಲಿರುವ ಪಠ್ಯಗಳ ಹೊರೆಯನ್ನು ಈಗ ಇರುವುದಕ್ಕಿಂತಲೂ ಅರ್ಧದಷ್ಟು ಇಳಿಕೆ ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ನಿರ್ಧರಿಸಿದೆ.
ಈ ಕುರಿತಂತೆ ಮಾತನಾಡಿರುವ ಸಚಿವ ಪ್ರಕಾಶ್ ಜಾವ್ಡೇಕರ್, ಮಕ್ಕಳಿಗೆ ಶಿಕ್ಷಣದೊಂದಿಗೆ ದೈಹಿಕ ಶಿಕ್ಷಣ, ಆರೋಗ್ಯ ಶಿಕ್ಷಣ, ಜೀವನಾವಶ್ಯಕ ಕೌಶಲ್ಯಗಳು, ಜೀವನದ ನೀತಿಗಳು ಹಾಗೂ ನೈತಿಕ ಆಧಾರಿತ ಶಿಕ್ಷಣಗಳು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಎನ್‌ಸಿಇಆರ್‌ಟಿ ಪಠ್ಯಗಳ ಹೊರೆಯನ್ನು ಸುಮಾರು ಅರ್ಧದಷ್ಟು ಇಳಿಕೆ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ ಎಂದು ತಿಳಿಸಿದ್ದಾರೆ.
ಇನ್ನು, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬದಲಾವಣೆ ಮಾಡುವ ಅಗತ್ಯವಿದ್ದು, ಈ ಕುರಿತಂತೆ ಕರಡು ಪ್ರತಿ ಸಿದ್ದವಾಗುತ್ತಿದ್ದು, ಈ ತಿಂಗಳಾಂತ್ಯಕ್ಕೆ ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.
Discussion about this post