ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿಯ (BJP) ವಿಜಯ ಯಾತ್ರೆ ಇಂದಿನಿಂದಲೇ ಆರಂಭವಾಗಿದ್ದು, ಇನ್ನು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಲ್ಲಿ ಎನ್ಡಿಎ (NDA) ಅಭ್ಯರ್ಥಿಗಳು ಗೆಲುವು (Win) ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮುಂದಿನ ಚುನಾವಣೆಗಳಲ್ಲೂ ಬಿಜೆಪಿ ಗೆಲುವು
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆಗಳಲ್ಲಿಯೂ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ. 2028ರ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಡಿ.ಎಸ್. ಅರುಣ್ ಹೇಳಿದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯದ ಜನರು ಸಂಕಷ್ಟಕ್ಕೀಡಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಸಿಂಗಲ್ ಡಿಜಿಟ್ಗೆ ತರುವ ಮೂಲಕ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದರು.
NDA: ನಾಲ್ಕಕ್ಕೆ ನಾಲ್ಕು ಸ್ಥಾನಗಳಲ್ಲಿ ಎನ್ಡಿಎ ಗೆಲುವು
‘ನಾಲ್ಕು ಟೆಸ್ಟ್ಗಳಲ್ಲಿ ಪಾಸಾಗಿದ್ದೇವೆ, ಮುಂಬರುವ ಪರೀಕ್ಷೆಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ’ ಎಂದು ಡಿ.ಎಸ್. ಅರುಣ್ ಹೇಳಿದರು.
ಇವಿಎಂ ವ್ಯವಸ್ಥೆಯನ್ನು ವಿರೋಧಿಸಿ ಮತಪತ್ರದ ಮೂಲಕ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದ ಕಾಂಗ್ರೆಸ್ಗೆ ಈ ಚುನಾವಣೆಯ ಫಲಿತಾಂಶ ಜನರು ನೀಡಿದ ಉತ್ತರವಾಗಿದೆ. ಪ್ರಜ್ಞಾವಂತ ಶಿಕ್ಷಕರು ಹಾಗೂ ಪದವೀಧರ ಮತದಾರರು ತಮ್ಮ ಮತದಾನದ ಮೂಲಕ ತಕ್ಕ ಉತ್ತರ ನೀಡಿದ್ದಾರೆ. ನಾಲ್ಕಕ್ಕೆ ನಾಲ್ಕು ಸ್ಥಾನಗಳಲ್ಲೂ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ನಾಲ್ಕೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಮೊದಲ ಸುತ್ತಿನಿಂದಲೇ ಮುನ್ನಡೆ ಸಾಧಿಸಿ ಗೆಲುವು ದಾಖಲಿಸಿರುವುದು ವಿಶೇಷವಾಗಿದೆ. ಈ ಫಲಿತಾಂಶ ಬಿಜೆಪಿಯ ಸಂಘಟನಾ ಶಕ್ತಿ ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದರು.
Also Read>> ಬೆಂಗಳೂರು ರೈಲ್ವೆ ವಿಭಾಗದಲ್ಲಿ ವಿಚಕ್ಷಣಾ ಜಾಗೃತಿ ಸಪ್ತಾಹ 2026ಕ್ಕೆ ಚಾಲನೆ
ಒಗ್ಗಟ್ಟಿನ ಕಾರ್ಯಕರ್ತರಿಂದ ಗೆಲುವು ಸಾಧ್ಯ
ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬುದನ್ನು ಈ ಚುನಾವಣೆ ಮತ್ತೊಮ್ಮೆ ತೋರಿಸಿದೆ. ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಜನರು ತಮ್ಮ ಅಸಮಾಧಾನವನ್ನು ಮತದಾನದ ಮೂಲಕ ವ್ಯಕ್ತಪಡಿಸಿದ್ದಾರೆ. ಭ್ರಷ್ಟಾಚಾರಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಡಿ.ಎಸ್. ಅರುಣ್ ಟೀಕಿಸಿದರು.
ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ
ಎನ್ಡಿಎ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ನಗರ, ಗ್ರಾಮಾಂತರ ಹಾಗೂ ಜಿಲ್ಲಾಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವಿಜಯೋತ್ಸವದಲ್ಲಿ ಭಾಗವಹಿಸಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಪ್ರಮುಖರಾದ ಜ್ಯೋತಿ ಪ್ರಕಾಶ್, ಬಳ್ಳಕೆರೆ ಸಂತೋಷ್, ಮಾಲತೇಶ್, ಸುರೇಖಾ ಮುರಳಿಧರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಧುರ ಶಿವಾನಂದ್, ಸಿದ್ದಲಿಂಗಪ್ಪ, ಸುರೇಶ್, ರಶ್ಮಿ, ಶ್ರೀನಿವಾಸ್, ವಿಶ್ವನಾಥ್, ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








