ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಎನ್’ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವಿದ್ಯಾರ್ಥಿನಿ ಎ.ಆರ್. ಸುಪ್ರದಾ ಅವರು ರಾಷ್ಟ್ರೀಯ ಯೂತ್ ಪಾರ್ಲಿಮೆಂಟ್ ಫೆಸ್ಟ್’ಗೆ ಕರ್ನಾಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದು, ಈ ಮೂಲಕ ಮಲೆನಾಡಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ.
ನೆಹರು ಯುವ ಕೇಂದ್ರದ ವತಿಯಿಂದ ಕಳೆದ ಫೆಬ್ರವರಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಯೂತ್ ಪಾರ್ಲಿಮೆಂಟ್ ಫೆಸ್ಟ್’ನಲ್ಲಿ ಭಾಗವಹಿಸಿದ್ದರು. ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ನ.14 ರ ಮಕ್ಕಳ ದಿನಾಚರಣೆಯಂದು ದೆಹಲಿ ಪಾರ್ಲಿಮೆಂಟಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ವಿದ್ಯಾರ್ಥಿನಿಯು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎ.ಎಸ್. ರವಿಕುಮಾರ್ ಹಾಗೂ ಎಸ್’ಆರ್’ಎನ್‌ಎಂ ಕಾಲೇಜಿನ ಪ್ರಥಮ ದರ್ಜೆ ಸಹಾಯಕರಾದ ಜ್ಯೋತಿ ಅವರ ಪುತ್ರಿ.
ಸುಪ್ರದಾ ಅವರ ಅಭೂತಪೂರ್ವ ಸಾಧನೆಗೆ, ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಮಲೆನಾಡಿನ ಹೆಮ್ಮೆಯನ್ನು ನವದೆಹಲಿಯಲ್ಲಿ ಪ್ರತಿನಿಧಿಸುತ್ತಿರುವ ಈಕೆಯನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















