ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ #NewCriminalLaw ಜಾರಿ ಇದೇ ಜುಲೈ 1ರಿಂದ ಜಾರಿಗೆ ಬರಲಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಜುಲೈ 1ರಿಂದಲೇ ಮೂರೂ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿದೆ ಎಂದಿದೆ.
ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಸಂಸತ್ ಇತ್ತೀಚೆಗೆ ಅಂಗೀಕರಿಸಿತ್ತು. ಇದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್’ನಲ್ಲಿ ಅಂಕಿತ ಹಾಕಿದ್ದರು.
ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಮಸೂದೆಯು 1860 ರ ಭಾರತೀಯ ದಂಡ ಸಂಹಿತೆ (ಐಪಿಸಿ), 1973 ರ ಕ್ರಿಮಿನಲ್ ಪ್ರೋಜರ್ ಕೋಡ್ ಮತ್ತು 1872 ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ.
ಈ ಕುರಿತಂತೆ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ, ಹೊಸ ಕಾನೂನುಗಳು ತಂತ್ರಜ್ಞಾನದ ಬಳಕೆಯನ್ನು ಪ್ರೋತ್ಸಾಹಿಸುತ್ತವೆ. ತನಿಖೆ, ಪ್ರಾಸಿಕ್ಯೂಷನ್ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯವು ವಿಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತವೆ. ಹೊಸ ಕಾನೂನುಗಳು ಭಾರತೀಯತೆ, ಭಾರತೀಯ ಸಂವಿಧಾನ ಮತ್ತು ಜನರ ಯೋಗಕ್ಷೇಮಕ್ಕೆ ಒತ್ತು ನೀಡುತ್ತವೆ ಎಂದು ಪ್ರತಿಪಾದಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post