ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು #President Droupadi Murmu ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.
ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.
Also read: ರೋಬೋಟ್ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ | ಶೀಘ್ರ ಚೇತರಿಕೆಗೆ ಸಹಕಾರಿ | ಸಚಿವ ರಾಮಲಿಂಗಾರೆಡ್ಡಿ

ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಯ ಪುನಶ್ಚೇತನಕ್ಕೆ ₹11,400 ಕೋಟಿಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ ₹20,000 ಕೋಟಿಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು.
ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ಕೊಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post