ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ #Minister Shivaraj Singh Chouhan ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ರಾಜ್ಯ ಅಡಿಕೆ ರೈತರು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ವಿವರವಾದ ಮಾಹಿತಿಯನ್ನು ಕೃಷಿ ಸಚಿವರಿಗೆ ತಿಳಿಸಲಾಯಿತು. ಕೇಂದ್ರ ಕೃಷಿ ಸಚಿವರು, ಅಡಿಕೆ ರೈತರ ಬಗ್ಗೆ ಈ ಹಿಂದೆ ಸಲ್ಲಿಸಿರುವ ವರದಿಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ, ವಿಜ್ಞಾನಿಗಳ ತಂಡದೊಂದಿಗೆ ತೊಂದರೆಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಈ ವೇಳೆ ಭರವಸೆ ನೀಡಿದರು.
ಈ ಸಭೆಯಲ್ಲಿ ಕೇಂದ್ರ ಕೈಗಾರಿಕಾ ಹಾಗೂ ಉಕ್ಕು ಖಾತೆಯ ಸಚಿವರು ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರು ಪ್ರಹ್ಲಾದ ಜೋಶಿ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರು ಸೋಮಣ್ಣ, ಸಂಸದ ರಾಘವೇಂದ್ರ, ಆರಗ ಜ್ಞಾನೇಂದ್ರ, ಶಾಸಕರು ಹಾಗೂ ಮಾಜಿ ಸಚಿವರು ಮತ್ತು ಸಂಸದರಾದ ವಿಶ್ವೇಶ್ವರಯ್ಯ ಕಾಗೇರಿ, ಗೋವಿಂದ ಕಾರಜೋಳ, ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಯದುವೀರ್ ಒಡೆಯರ್ ಮತ್ತು ಪ್ರಭಾ ಮಲ್ಲಿಕಾರ್ಜುನ ಹಾಗೂ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ಮತ್ತಿತರ ಅಧಿಕಾರಿಗಳು ಸಹ ಸಭೆಯಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post