ಕಲ್ಪ ಮೀಡಿಯಾ ಹೌಸ್ | ನವದೆಹಲಿ/ ಬಳ್ಳಾರಿ |
ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿ ಮಾಜಿ ಸಚಿವ ಗಂಗಾವತಿ ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ #Janardhana Reddy ಬಿಗ್ ರಿಲೀಫ್ ಸಿಕ್ಕಿದ್ದು, ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಅನುಮತಿ ದೊರೆತಿದೆ.
ಬಳ್ಳಾ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ #Supreme Court ತೆರವು ಮಾಡಿದ್ದು, ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ.
Also read: ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.
ಆಂಧ್ರದ ಅನಂತಪುರ, ಕರ್ನೂಲು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 2011 ಸೆಪ್ಟೆಂಬರ್ 5ರಂದು ಜನಾರ್ದನ ರೆಡ್ಡಿಯ ಬಂಧನವಾಗಿತ್ತು. ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷಿ ನಾಶ ಮಾಡುವ ಆತಂಕವಿದೆ. ಈ ಕಾರಣಕ್ಕೆ ಬಳ್ಳಾರಿ, ಕರ್ನೂಲು ಮತ್ತು ಆನಂತಪುರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಸಿಬಿಐ ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಮೂರು ಜಿಲ್ಲೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post