ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಮಹತ್ವ ನಿರ್ಣಯಕ್ಕೆ ಮುಂದಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು CAA ಜಾರಿಗೆ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ ಎಂದು ವರದಿಯಾಗಿದೆ.
ಸಿಎಎ ನಿಯಮಗಳ ಅಧಿಸೂಚನೆ ಹೊರಡಿಸಿದ ಬಳಿಕ ಕೇಂದ್ರದ ಮೋದಿ PM Modi ಸರ್ಕಾರವು 2014ರ ಡಿ.31ರವರೆಗೆ ಭಾರತಕ್ಕೆ ವಲಸೆ ಬಂದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ, ಆಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು ಶೋಷಣೆಗೆ ಒಳಗಾದವರು ಭಾರತೀಯ ಪೌರತ್ವವನ್ನು ಪಡೆಯುತ್ತಾರೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ.
2019ರಲ್ಲಿ ಅಂಗೀಕಾರಗೊಂಡಿದ್ದ ಈ ಕಾನೂನಿಗೆ ರಾಷ್ಟ್ರಪತಿಗಳ President ಅಂಕಿವೂ ದೊರೆತಿತ್ತು. ಆದರೆ ದೇಶದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದ ಕಾರಣ ಜಾರಿಗೆ ಅಧಿಸೂಚನೆ ಹೊರಡಿಸಿಲಿಲ್ಲ. ಇದು ಲೋಕಸಭೆ ಚುನಾವಣೆಯಲ್ಲಿ ಭಾರತದಾದ್ಯಂತ ಭಾರಿ ಪರಿಣಾಮ ಬೀರಲಿದ್ದು, ಬಿಜೆಪಿ ತಾನು ಭರವಸೆ ನೀಡಿದ ಪ್ರಮುಖ ಸೈದ್ಧಾಂತಿಕ ಕಾರ್ಯಸೂಚಿಯನ್ನು ಈ ಮೂಲಕ ಈಡೇರಿಸಿದಂತಾಗಿದೆ.
Also read: ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್
ವೆಬ್‌ಸೈಟ್ ಕ್ರ್ಯಾಶ್:
ಸಿಎಎ ನಿಯಮ ಪ್ರಕಟಗೊಂಡ ಬೆನ್ನಲ್ಲೇ ಸರ್ಕಾರದ ಇ-ಗೆಜೆಟ್ ವೆಬ್‌ಸೈಟ್ ಕ್ರ್ಯಾಶ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನರು ವೆಬ್‌ಸೈಟಿಗೆ ಭೇಟಿ ನೀಡಿದ ಪರಿಣಾಮ ವೆಬ್‌ಸೈಟ್ ಪುಟ ಓಪನ್ ಆಗುತ್ತಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post