ಕಲ್ಪ ಮೀಡಿಯಾ ಹೌಸ್
ನವದೆಹಲಿ: ಕೊರೋನಾ, ಲಾಕ್ ಡೌನ್‌ನ ಪರಿಣಾಮ ಸಂಕಷ್ಟದಲ್ಲಿ ಸಿಲುಕಿ ನರಳುತ್ತಿರುವ ದೇಶದ ಜನತೆಗೆ ಇದೀಗ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ತಟ್ಟಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ ಮಾಡಲಾಗಿದ್ದು, ಪ್ರತಿ ಸಿಲಿಂಡರ್‌ಗೆ 25ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 884.50 ರೂ. ತಲುಪಿದರೆ, ಬೆಂಗಳೂರಿನಲ್ಲಿ 862 ರೂ. ಇದ್ದ ಸಿಲಿಂಡರ್ ಬೆಲೆ ಈಗ 887 ರೂ. ಆಗಿದೆ.
ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಆಗಸ್ಟ್ 17ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ೨೫ರೂ. ಏರಿಕೆ ಮಾಡಲಾಗಿದೆ. 15 ದಿನಗಳ ಅಂತರದಲ್ಲಿ 50ರೂ. ಏರಿಕೆಯಾಗಿದೆ. ಜನವರಿ 1ರಿಂದ ಸೆಪ್ಟಂಬರ್ 1ರವರೆಗೆ ಎಲ್‌ಪಿಜಿ ಅಡುಗೆ ಅನಿಲದ ಬೆಲೆ 190 ರೂ ಏರಿಕೆಯಾದಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post