ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್’ಡಿಎ ಮೈತ್ರಿಕೂಟದಲ್ಲಿನ ಪ್ರಮುಖ ಪಕ್ಷ ಬಿಜೆಪಿಯೇ ಲೋಕಸಭಾ #Parliament ಸ್ಪೀಕರ್ ಸ್ಥಾನವನ್ನು ಉಳಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ಮೈತ್ರಿಕೂಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಬಿಜೆಪಿ ಬಳಿಯೇ ಸ್ಪೀಕರ್ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ.
ಅಲ್ಲದೇ, ಪ್ರಮುಖವಾಗಿ ಓಂ ಬಿರ್ಲಾ ಅವರೇ ಈ ಅವಧಿಗೂ ಸಹ ಸ್ಪೀಕರ್ ಆಗಿ ಮುಂದುವರೆಯುವ ಸಾಧ್ಯತೆಯೂ ಸಹ ಇದೆ ಎನ್ನಲಾಗಿದೆ.
Also read: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಬಿಜೆಪಿ ಪ್ರತಿಭಟನೆ ಹಾಸ್ಯಾಸ್ಪದ: ಎಂ.ರಮೇಶ್ ಶೆಟ್ಟಿ
ಲೋಕಸಭಾಧ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಲಿದ್ದು, ಬಿಜೆಪಿಯ ಮಿತ್ರಪಕ್ಷಗಳು ಕೂಡ ಅದಕ್ಕೆ ಒಪ್ಪಿಗೆ ಸೂಚಿಸಬಹುದು ಎಂದು ಮೂಲಗಳು ಹೇಳಿವೆ.
ಇದೇ ಜೂನ್ 24 ರಿಂದ ಪ್ರಾರಂಭವಾಗುವ 18 ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಂಚಿತವಾಗಿ, ಸ್ಪೀಕರ್ ಆಯ್ಕೆಯ ಬಗ್ಗೆ ಒಮ್ಮತಕ್ಕೆ ಬರಲು ಎನ್’ಡಿಎ ಮಿತ್ರಪಕ್ಷಗಳ ನಿರ್ಣಾಯಕ ಸಭೆಯು ಈ ವಾರ ನಡೆಯಲಿದೆ. ಈ ಸಭೆಯಲ್ಲಿ ಮಿತ್ರಪಕ್ಷಗಳಿಗೆ ಒಪ್ಪಿಗೆಯಾಗುವ ಸ್ಪೀಕರ್ ಆಯ್ಕೆ ಮಾಡುವುದು ಬಿಜೆಪಿ ಉದ್ದೇಶ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post