ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜಧಾನಿ ದೆಹಲಿಯ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ #Bomb threat to Schools ಬಂದಿದ್ದು, ಅಧಿಕಾರಿಗಳು ತ್ವರಿತ ಕ್ರಮಕ್ಕೆ ಮುಂದಾಗಿದ್ದಾರೆ.
ಡಿ.8ರ ರಾತ್ರಿ 11:38ರ ಸುಮಾರಿಗೆ ಈ ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದ್ದು, ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಇತರ ತುರ್ತು ಸೇವೆಗಳ ಸಹಯೋಗದೊಂದಿಗೆ ಶೋಧ ಕಾರ್ಯಾಚರಣೆ ನಡೆಸಲಾಯಿತು.

Also read: ವಾಯುಭಾರ ಕುಸಿತ | ಈ ದಿನಾಂಕಗಳಂದು ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
ಕಳುಹಿಸಲಾಗಿರುವ ಬೆದರಿಕೆ ಮೇಲ್‌ನಲ್ಲಿ, ಶಾಲೆ ಕಟ್ಟಡಗಳ ಒಳಗೆ ಅನೇಕ ಬಾಂಬ್‌ಗಳನ್ನು ಇಟ್ಟಿದ್ದೇನೆ. ಬಾಂಬ್‌ಗಳು ಚಿಕ್ಕದಾಗಿದ್ದು ಅಡಗಿಸಿ ಇಡಲಾಗಿದೆ. ಇದರಿಂದ ಕಟ್ಟಡಕ್ಕೆ ಹೆಚ್ಚಿನ ಹಾನಿಯಾಗುವುದಿಲ್ಲ, ಆದರೆ ಬಾಂಬ್‌ಗಳನ್ನು ಸ್ಫೋಟಿಸುವಾಗ ಅನೇಕ ಜನರು ಗಾಯಗೊಳ್ಳಬಹುದು. ನನಗೆ 30 ಸಾವಿರ ಡಾಲರ್ ಹಣ ಬರದಿದ್ದರೆ ಬಾಂಬ್ ಸ್ಫೋಟಿಸುತ್ತೇನೆ ಎಂದು ಬೆದರಿಕೆ ಹಾಕಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post