ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಲೋಕಸಭಾ ಚುನಾವಣೆಗೂ ಮುನ್ನ ಜಾರಿ ಮಾಡುವುದು ನಿಶ್ಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ CAA ನೋಟಿಫೈ ಮಾಡುವುದು ನಿಶ್ಚಿತವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಸಂಶಯ ಹಾಗೂ ಗೊಂದಲ ಬೇಡ ಎಂದರು.
ಸಿಎಎ ದೇಶದ ಕಾಯ್ದೆಯಾಗಿದ್ದು, ದೇಶಕ್ಕಾಗಿ ಇದರ ಜಾರಿ ಮಾಡುವುದು ಅನಿವಾರ್ಯವಾಗಿದೆ. ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದರು.
Also read: ಸಿಎಎ ಜಾರಿ ನಿಶ್ಚಿತ | ಆದರೆ ಯಾವಾಗ? ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆ
2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಪರಿಣಾಮ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೆÊಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post