ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಬೀದಿಬದಿ ವ್ಯಾಪಾರಿಗಳು ಹಾಗೂ ಹೋಂಸ್ಟೇ ನಡೆಸುವವರಿಗೆ ಕೇಂದ್ರ ಸರ್ಕಾರ ಮಹತ್ವದ ಸಂತೋಷಕರ ಸುದ್ದಿ ನೀಡಿದೆ.
ಈ ಕುರಿತಂತೆ ತಮ್ಮ ಬಜೆಟ್ ಭಾಷಣದಲ್ಲಿ ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, #Nirmala Sitaraman ಬೀದಿ ಬದಿ ವ್ಯಾಪಾರಿಗಳಿಗೆ ಕ್ರೆಡಿಕ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ಪಿಎಂ ಸ್ವಾನಿಧಿ ಯೋಜನೆಯಡಿಯಲ್ಲಿ 30 ಸಾವಿರ ಮೌಲ್ಯದ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಹೀಗೆ ನೀಡಲಾಗುವ ಕ್ರೆಡಿಟ್ ಕಾರ್ಡಗಳನ್ನು ಯುಪಿಐಗೆ ಲಿಂಕ್ ಮಾಡಲಾಗಿರುತ್ತದೆ. ಈ ಕ್ರಮದಿಂದಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.
ಹೋಂಸ್ಟೇಗಳಿಗೆ ಏನು?
ಪ್ರವಾಸೋದ್ಯಮವನ್ನು ಉತ್ತೇಜಿಸುವ ಭಾಗವಾಗಿ ಹೋಂಸ್ಟೇ ನಡೆಸುವ ಮಾಲೀಕರಿಗೆ ಮುದ್ರಾ ಲೋನ್ ನೀಡುವ ಕುರಿತಾಗಿ ವಿತ್ತ ಸಚಿವರು ಘೋಷಣೆ ಮಾಡಿದ್ದಾರೆ.
Also read: ಸ್ವಿಗ್ಗಿ, ಓಲಾ ಕಾರ್ಮಿಕರಿಗೆ ಮೋದಿ ಸರ್ಕಾರ ಬೂಸ್ಟರ್ | ಏನಿದು ಶುಭ ಸುದ್ದಿ?
ದೇಶದಾದ್ಯಂತ ಹೋಂಸ್ಟೇಗಳನ್ನು ಅಧಿಕೃತವಾಗಿ ಹಾಗೂ ಕಾನೂನಾತ್ಮಕವಾಗಿ ನಡೆಸುತ್ತಿರುವವರಿಗೆ ಮುದ್ರಾ ಯೋಜನೆ ಅಡಿಯಲ್ಲಿ ಇನ್ಮುಂದೆ ಸಾಲ ದೊರೆಯಲಿದೆ.
ಕ್ಯಾನ್ಸರ್ ರೋಗಿಗಳಿಗೆ ಸಮಾಧಾನಕರ ಸುದ್ದಿ
ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
2025-26ರ ಸಾಲಿನ ಬಜೆಟ್ ಭಾಷಣದಲ್ಲಿ ಈ ಕುರಿತಂತೆ ಘೋಷಣೆ ಮಾಡಿದ್ದಾರೆ.
ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿರುವ ಜಿಲ್ಲಾಸ್ಪತ್ರೆಗಳಲ್ಲಿಯೇ ಕ್ಯಾನ್ಸರ್ ರೋಗ ಚಿಕಿತ್ಸಾ ಘಟಕ ಹಾಗೂ ಕೇರ್ ಯೂನಿಟ್ ಆರಂಭಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ದೇಶದ ಬಹಳಷ್ಟು ಜಿಲ್ಲಾಸ್ಪತ್ರೆಗಳಲ್ಲಿ ಸದ್ಯ ಕ್ಯಾನ್ಸರ್ ಚಿಕಿತ್ಸಾ ಘಟಕ ಇಲ್ಲ. ಬದಲಾಗಿ ಖಾಸಗೀ ಆಸ್ಪತ್ರೆ ಆಥವಾ ಬೃಹತ್ ನಗರಗಳಿಗೆ ಹೋಗಬೇಕಿದೆ. ಇದು ಬಡ ಹಾಗೂ ಮಧ್ಯಮ ವರ್ಗದ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯವುದು ಕಷ್ಟವಾಗಿತ್ತು. ಇದನ್ನರಿತ ಕೇಂದ್ರ ಸರ್ಕಾರ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ವಿಭಾಗ/ಕೇಂದ್ರ ಆರಂಭಕ್ಕೆ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ವಿಚಾರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post