ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರ #Drought relief fund ಬಿಡುಗಡೆ ಮಾಡಿದ್ದು, 3,454 ಕೋಟಿ ರೂ. ನೀಡುವುದಾಗಿ ಇಂದು (ಶನಿವಾರ) ಘೋಷಣೆ ಮಾಡಿದೆ.
Also read: ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಗಮನಾರ್ಹ ಸಾಧನೆ
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,172 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳುಗಳೇ ಕಳೆದರೂ ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ #Supreme Court ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಕಳೆದ ವಾರ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್‌ನಲ್ಲಿ ಒಪ್ಪಿಕೊಂಡಿತ್ತು. ಅದರಂತೆ ಕೇಂದ್ರ ಸರ್ಕಾರ ಬರ ಪರಿಹಾರ ಘೋಷಣೆ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


























